ಎಸ್ಸೆಸ್ಸೆಲ್ಸಿಯಲ್ಲಿ 625 ಕ್ಕೆ 625 ಅಂಕ : ಜಿಲ್ಲೆಗೆ ಪ್ರಥಮ ಸ್ಥಾನಕ್ಕೆ
ವಿಜಯನಗರವಾಣಿ ಸುದ್ದಿ ,
ಹಗರಿಬೊಮ್ಮನಹಳ್ಳಿ : ತಾಲೂಕಿನ ವಲ್ಲಭಾಪುರ ಗ್ರಾಮದ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ವಿದ್ಯಾರ್ಥಿ ಟಿ.ಕಿರಣ ಕುಮಾರ 2020-21 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾನೆ.
ವಿದ್ಯಾರ್ಥಿ ಸಂಡೂರು ತಾಲೂಕಿನ ವೆಂಕಟಗಿರಿ ತಾಂಡಾದ ನಿವಾಸಿಯಾಗಿದ್ದು, ಇಡೀ ಜಿಲ್ಲೆಗೆ ಹೆಚ್ಚಿನ ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ತಂದೆ ತಿಪ್ಪಾನಾಯ್ಕ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎನ್.ರಾಜಪ್ಪ, ತಾಲೂಕು ಸಹಾಯಕ ನಿದೇರ್ಶಕ ಬಿ.ಎಂ..ದಿನೇಶ್, ಬಿಇಒ ಶೇಖರಪ್ಪ ಹೊರಪೇಟೆ, ಶಾಲೆಯ ಪ್ರಾಚಾರ್ಯ ಜಯಸೂರ್ಯಗೌಡ ಹರ್ಷ ವ್ಯಕ್ತಪಡಿಸಿದ್ದಾರೆ.