ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದು ನಿಷೆಧ: ಸಿ. ಎಂ .ಬೊಮ್ಮಾಯಿ ಆದೇಶ

Share and Enjoy !

Shares
Listen to this article

ವಿಜಯನಗರ ವಾಣಿ

ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ, ಶೀಘ್ರವೇ ಆದೇಶ ಹೊರಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಿಎಂ ಈ ಆದೇಶವನ್ನು ಮೌಖಿಕವಾಗಿ ಹೇಳಿದ ತಕ್ಷಣ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಸರ್ಕಾರಿ ಆದೇಶವನ್ನು ಜಾರಿ ಮಾಡಿದ್ದಾರೆ.

ಇನ್ನು ಮುಂದೆ ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಜೊತೆಗೆ ಈ ನಿರ್ದೇಶನವನ್ನು ಚಾಚು ತಪ್ಪದೇ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೊಳಪಡುವ ಎಲ್ಲಾ ಸಂಸ್ಥೆಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲು ತಿಳಿಸಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಬೊಮ್ಮಾಯಿ ತಿಳಿಸಿದರು.

Share and Enjoy !

Shares