ಪೆಗಾಸಸ್ ಗೂಢಚರ್ಯೆ ಪ್ರಕರಣ ಕುರಿತು ಸಲ್ಲಿಸಿರುವ ಅರ್ಜಿಗಳು ಅಪೂರ್ಣವಾಗಿವೆ: ಕೇಂದ್ರ ಸರ್ಕಾರ

Share and Enjoy !

Shares
Listen to this article

ವಿಜಯನಗರ ವಾಣಿ

ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳಲ್ಲಿ ಯಾವುದೇ ಹುರುಳಿಲ್ಲ, ಅಪೂರ್ಣವಾಗಿವೆ ಮತ್ತು ಮಾಧ್ಯಮಗಳಲ್ಲಿ ಪ್ರಕಟಗೊಂಡ ಆಧಾರ ರಹಿತ ಮಾಹಿತಿಯನ್ನು ಆಧರಿಸಿ ದೂರು ಸಲ್ಲಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಈ ಸಂಬಂಧ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಲಿದ್ದು, ಆ ಸಮಿತಿ ಕೂಲಂಕಷವಾಗಿ ತನಿಖೆ ನಡೆಸಲಿದೆ ಎಂದಿದೆ.

ಪೆಗಾಸಸ್ ಹಗರಣ ಕುರಿತಂತೆ ಸರ್ಕಾರದ ನಿಲುವನ್ನು ಈಗಾಗಲೇ ಸಂಸತ್ತಿನಲ್ಲಿ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಸ್ಪಷ್ಟಪಡಿಸಿದ್ದಾರೆ ಎಂದು ಕೇಂದ್ರ ಇದೇ ಸಂದರ್ಭದಲ್ಲಿ ತಿಳಿಸಿದೆ. ಮುಖ್ಯನ್ಯಾಯಮೂರ್ತಿ ಎನ್.ವಿ ರಮಣ, ಸೂರ್ಯಕಾಂತ್ ಮತ್ತು ನಿರುದ್ಧ ಬೋಸ್ ಅವರನ್ನೊಳಗೊಂಡ ಸದಸ್ಯಪೀಠದೆದುರು ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದೆ.

ಕೇಂದ್ರ ಸರ್ಕಾರಕ್ಕೆ ಮಸಿ ಬಳಿಯಲು ದುರುದ್ದೇಶದಿಂದ ಸುಳ್ಳು ವಿಚಾರಗಳನ್ನು ಮಾಧ್ಯಮಗಳಲ್ಲಿ ಹರಿಬಿಡಲಾಗುತ್ತಿದೆ ಎಂದು ಕೇಂದ್ರ ಅಭಿಪ್ರಾಯಪಟ್ಟಿದೆ.

Share and Enjoy !

Shares