200 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ..

Share and Enjoy !

Shares
Listen to this article

ವಿಜಯನಗರ ವಾಣಿ

ಪದವಿ ಪಾಸಾದವರಿಗೆ 200 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು ವಿದ್ಯುತ್​​ ಸರಬರಾಜು ಕಂಪೆನಿಯಲ್ಲಿ ಖಾಲಿ ಇರುವ 200 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದೆ.

ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5000 ರಿಂದ 7000 ರೂ. ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ ಪಾವತಿಸುವುದು ಹೇಗೆ?:

ಅರ್ಜಿದಾರರು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವುದು ಹೇಗೆ?:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಎನ್‌ಎಟಿಎಸ್ ಪೋರ್ಟಲ್ ನಲ್ಲಿ ತೆರಳಿಸೆಪ್ಟೆಂಬರ್ 5,2021ರೊಳಗೆ ತಮ್ಮ ಹೆಸರನ್ನು ನೊಂದಾಯಿಸಬೇಕು. ತದನಂತರ ಮೆಸ್ಕಾಂ ಅಧಿಕೃತ ವೆಬ್‌ಸೈಟ್ https://mescom.karnataka.gov.in/ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು. ಸೆಪ್ಟೆಂಬರ್ 9,2021ರೊಳಗೆ ಅರ್ಜಿಯನ್ನು ಹಾಕಬಹುದು.

Share and Enjoy !

Shares