ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಾವಣೆ ಮಾಡಬೇಕು ಎಂಬುವುದು ಬಿಜೆಪಿ ಮುಖಂಡರ ವಾದ.!

Share and Enjoy !

Shares
Listen to this article

ವಿಜಯನಗರ ವಾಣಿ

ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಆಡಳಿತ ಪಕ್ಷ ಬಿಜೆಪಿ ಹಾಗೂ ವಿರೋಧ ಪಕ್ಷ ಕಾಂಗ್ರೆಸ್ ನಡುವೆ ಜಟಾಪಟಿ ನಡೆಯುತ್ತಿದ್ದು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಹೆಸರು ಬದಲಾವಣೆ ಮಾಡಬೇಕೋ ಬೇಡವೋ ಎಂಬುವುದನ್ನು ಸಂಪುಟ ಚರ್ಚೆಯ ಬಳಿಕ ನಿರ್ಧಾರ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಆಗಸ್ಟ್ 19 ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಸದ್ಯ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ಸಭೆಯಲ್ಲಿ ಈ ಕುರಿತಾಗಿ ಒಂದು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ವಿಚಾರವಾಗಿ ಸಚಿವ ಕೆ. ಗೋಪಾಲಯ್ಯ ಅವರು ಕೂಡಾ ಸುಳಿವು ನೀಡಿದ್ದು ಹೆಸರು ಬದಲಾವಣೆ ಮಾಡಬೇಕಾ ಬೇಡವೇ ಎಂಬುದು ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದಿದ್ದಾರೆ.

ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಾವಣೆ ಮಾಡಬೇಕು ಎಂಬುವುದು ಬಿಜೆಪಿ ಮುಖಂಡರ ವಾದವಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸೇರಿದಂತೆ ಹಲವರು ಇಂದಿರಾ ಕ್ಯಾಂಟೀನ್ ಹೆಸರಿಗೆ ಆಕ್ಷೇಪ ಎತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಹೆಸರು ಬದಲಾವಣೆ ಮಾಡಲು ಸಮ್ಮತಿಸುವುದಿಲ್ಲ ಎಂದು ಕಾಂಗ್ರೆಸ್ ಮುಖಂಡರು ಹೇಳುತ್ತಿದ್ದಾರೆ. ಒಟ್ಟಿನಲ್ಲಿ ಹೆಸರು ಬದಲಾವಣೆ ಜಟಾಪಟಿ ತೀವ್ರಗೊಂಡಿದೆ. ಈ ನಿಟ್ಟಿನಲ್ಲಿ ಸಂಪುಟ ಸಭೆಯಲ್ಲಿ ಏನು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂಬುದು ಸದ್ಯಕ್ಕೆ ಕುತೂಹಲ ಸೃಷ್ಟಿಸಿದೆ.

Share and Enjoy !

Shares