ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Share and Enjoy !

Shares
Listen to this article

ವಿಜಯನಗರ ವಾಣಿ

ಬಾರ್ಡರ್ ಸೆಕ್ಯುರಿಟಿ ಫೋರ್ಸ್​​ನಲ್ಲಿ 269 ಕಾನ್‌ಸ್ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದೆ. ಸೆಪ್ಟೆಂಬರ್ 14ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ:

ಮೆಟ್ರಿಕ್ಯುಲೇಶನ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಆಗಸ್ಟ್‌ 1,2021 ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 23 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700 ರಿಂದ 69,100 ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಆಧಿಕೃತ ವೆಬ್‌ಸೈಟ್ https://projects.bsf.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 14, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 

Share and Enjoy !

Shares