ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗಿರುವ ಸಿದ್ದರಾಮಯ್ಯ.

Share and Enjoy !

Shares
Listen to this article

ವಿಜಯನಗರ ವಾಣಿ

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಗರದ ಜಿಂದಾಲ್‌ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಶನಿವಾರ ದಾಖಲಾಗಲಿದ್ದಾರೆ. ಹತ್ತು ದಿನಗಳ ಕಾಲ ಅವರು ಅಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ‘ಶನಿವಾರ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗುವ ಸಿದ್ದರಾಮಯ್ಯ ಅವರು, ಆಗಸ್ಟ್‌ 31ರ ಸಂಜೆ ಅಲ್ಲಿಂದ ವಾಪಸಾಗಲಿದ್ದಾರೆ.

ಹತ್ತು ದಿನಗಳ ಕಾಲ ಪ್ರಕೃತಿ ಚಿಕಿತ್ಸೆಗೆ ಹೋಗುತ್ತಿದ್ದೇನೆ. ನೆಲಮಂಗಲ ಬಳಿಯ ಜಿಂದಾಲ್ ಪ್ರಕೃತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಹತ್ತು ದಿನಗಳ ಕಾಲ ನಾನು ಮನೆಯಲ್ಲಿ ಇರುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೆಹರು ಮತ್ತು ವಾಜಪೇಯಿ ಮಾದರಿ ನಾಯಕರು ಎಂಬ ಹೇಳಿಕೆ ವಿಚಾರದಲ್ಲಿ ಸಿ.ಟಿ.ರವಿಗೆ ಸ್ವಲ್ಪ ಜ್ಞಾನೋದಯ ಆದರೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿದ್ದಾರೆ.

Share and Enjoy !

Shares