ಸಣ್ಣ ರಾಜ್ಯ ಗೋವಾದ ಒತ್ತಡಕ್ಕೆ ಮಣಿದು ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ

Share and Enjoy !

Shares
Listen to this article

ವಿಜಯನಗರ ವಾಣಿ

ಸಣ್ಣ ರಾಜ್ಯವಾಗಿರುವ ಗೋವಾದ ಒತ್ತಡಕ್ಕೆ ಮಣಿಯುತ್ತಿರುವ ಕೇಂದ್ರ ಸರಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. 25 ಬಿಜೆಪಿ ಸಂಸದರನ್ನು ಗೆಲ್ಲಿಸಿದ್ದರೂ ರಾಜ್ಯಕ್ಕೆ ಕೇಂದ್ರದ ಕೊಡುಗೆ ಏನು ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕದ ಯೋಜನೆಗಳ ವಿಚಾರದಲ್ಲಿ ಕೇಂದ್ರ ಸರಕಾರ ಇಬ್ಬಗೆ ನೀತಿ ಅನುಸರಿಸುತ್ತಿದೆ. ಕಾವೇರಿ ವಿಚಾರವಾಗಿ ತಮಿಳುನಾಡು ಪರವಾಗಿ ಗೆಜೆಟ್ ನೊಟಿಫಿಕೆಷನ್ ಹೊರಡಿಸಿದರು. ಕಾವೇರಿ ವಿಚಾರದಲ್ಲಿ ತೋರಿಸಿದ ತರಾತುರಿಯನ್ನು ಯುಕೆಪಿಎ ನೀರಾವರಿ ಯೋಜನೆಯಲ್ಲೂ ತೋರಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರ ಉತ್ತರ ಕರ್ನಾಟಕದ ಜನರಿಗೆ ದ್ರೋಹ ಮಾಡಿದೆ. ಒಂದು ಕಡೆ ಕೇಂದ್ರ ಸರ್ಕಾರದಿಂದ ಯೋಜನೆಗಳಿಗೆ ಹಣ ಬರುತ್ತಿಲ್ಲ. ಇನ್ನೊಂದು ಕಡೆ ಉತ್ತರ ಕರ್ನಾಟಕಕ್ಕೆ ಕೇಂದ್ರ ಯಾವ ನ್ಯಾಯ ಕೊಡುತ್ತಿದೆ ಎನ್ನುವುದನ್ನು ತಿಳಿಸಬೇಕಿದೆ. ಮಹದಾಯಿ ವಿಚಾರದಲ್ಲಿ ಗೆಜೆಟ್ ಆದರೂ ಷರತ್ತು ಹಾಕಿದ್ದಾರೆ. ಗೋವಾ ತಕರಾರು ತೆಗೆದಾಗ ಮೂರು ಜನರ ಸಮಿತಿ ಮಾಡಿದರು. ಆದರೆ, ಅದರ ವರದಿ ಇನ್ನು ಬಂದಿಲ್ಲ. ಸಣ್ಣ ರಾಜ್ಯ ಗೋವಾದ ಒತ್ತಕ್ಕೆ ಮಣೆಯುತ್ತಿರುವ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದರು.

ಯುಕೆಪಿ ಪರವಾಗಿ ಆಲಮಟ್ಟಿಯಿಂದ, ಎತ್ತಿನಹೊಳಿ ಯೋಜನೆ ಪರವಾಗಿ ಸಕಲೇಶಪುರದಿಂದ, ಮಹದಾಯಿ ವಿಚಾರವಾಗಿ ಬೆಳಗಾವಿಯಿಂದ, ಕಾವೇರಿ ವಿಚಾರವಾಗಿ ತಲಕಾವೇರಿಯಿಂದ ಪಾದಯಾತ್ರೆ ಆರಂಭಿಸುತ್ತೇವೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅಗುತ್ತಿರುವ ಮಲತಾಯಿ ಧೋರಣೆ ಬಗ್ಗೆ ಹೋರಾಟ ಆರಂಭಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಕೋವಿಡ್ ಕಡಿಮೆಯಾದರೆ ವಿಜಯ ದಶಮಿಯಿಂದ ಹೋರಾಟ ಆರಂಭಿಸುತ್ತೇವೆ. ಮೊದಲ ಹಂತದಲ್ಲಿ ಮಹದಾಯಿ ವಿಚಾರದಲ್ಲಿ ಹೋರಾಟ ಆರಂಭ ಮಾಡುತ್ತೇವೆ. ತಮಿಳುನಾಡಿನ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುದಾನ‌ ನೀಡುತ್ತಿದೆ. ಆದರೆ, ರಾಜ್ಯದ ಯೋಜನೆಗಳಿಗೆ ಅನುದಾನ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌-ಬಿಜೆಪಿಯಿಂದ ಕೋವಿಡ್‌ ನಿಯಮ ಉಲ್ಲಂಘನೆ
ರಾಜ್ಯದಲ್ಲಿ ಕೋವಿಡ್ ಅನಾಹುತದಿಂದ ಬಹಳಷ್ಟು ಸಾವು ನೋವುಗಳು ಸಂಭವಿಸಿವೆ. ಒಂದು ಕಡೆ ಸರಕಾರ ಸಾಮಾಜಿಕ ಅಂತರ ಕಾಪಾಡಬೇಕು. ಮಾರ್ಗಸೂಚಿಯನ್ನು ಪಾಲಿಸಬೇಕು ಎಂದು ಹೇಳುತ್ತದೆ. ಆದರೆ, ಕಾಂಗ್ರೆಸ್‌, ಬಿಜೆಪಿ ಎರಡು ಪಕ್ಷಗಳು ಕೋವಿಡ್ ನಿಯಮಗಳನ್ನು ಪಾಲಿಸುತ್ತಿಲ್ಲ. ಕಾಂಗ್ರೆಸ್ ಉಸ್ತುವಾರಿ ನೇತೃತ್ವದಲ್ಲಿ ವಲಯವಾರು ಸಭೆ ನಡೆಸುತ್ತಿದ್ದರೆ, ಬಿಜೆಪಿ ಜನಾಶೀರ್ವಾದ ಯಾತ್ರೆ ಮಾಡಿ ಕೊರೊನಾ ನಿಯಮ ಉಲ್ಲಂಘಿಸುತ್ತಿವೆ ಎಂದು ಕಿಡಿಕಾರಿದರು.

ಮೂರನೇ ಅಲೆಗೆ ನಾವೇ ಆಹ್ವಾನ ನೀಡುವುದು ಬೇಡ
ಹುಬ್ಬಳ್ಳಿ-ಧಾರವಾಡ ಪಾಲಿಕೆ‌ ಚುನಾವಣೆಯಲ್ಲಿ ಎಲ್ಲ ಪಕ್ಷಗಳು ತಜ್ಞರು ಕೊಟ್ಟ ಮಾರ್ಗಸೂಚಿಗಳನ್ನು ಪಾಲಿಸಬೇಕು. ಕೊರೊನಾ ಮೂರನೇ ಅಲೆಗೆ ನಾವೇ ಆಹ್ವಾನ ನೀಡಬಾರದು. ಹುಬ್ಬಳ್ಳಿ ಧಾರವಾಡದಲ್ಲಿ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಿದ್ದೇವೆ. ಈ ಸಲ ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆಯಲ್ಲಿ 60ಕ್ಕೂ ಹೆಚ್ಚಿನ ಅಭ್ಯರ್ಥಿಗಳನ್ನ ಕಣಕ್ಕೆ ಇಳಿಸುತ್ತೇವೆ. ಕಲಬುರಗಿಯಲ್ಲಿ 54 ಅಭ್ಯರ್ಥಿಗಳನ್ನ ಕಣಕ್ಕೆ ಇಳಿಸುತ್ತಿದ್ದೇವೆ. ಬೆಳಗಾವಿಯಲ್ಲಿ ಸ್ವಲ್ಪ ಕಡಿಮೆ ಅಭ್ಯರ್ಥಿಗಳನ್ನ ಕಣಕ್ಕೆ ಇಳಿಸಿದ್ದೇವೆ ಎಂದರು.

Share and Enjoy !

Shares