ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಡೇಟ್ ಕೊನೆಗೂ ಫಿಕ್ಸ್!

Share and Enjoy !

Shares
Listen to this article

ವಿಜಯನಗರ ವಾಣಿ

ಅಭಿನಯ ಚಕ್ರವರ್ತಿ ಸುದೀಪ್ ನಟನೆಯ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಡೇಟ್ ಕೊನೆಗೂ ಫಿಕ್ಸ್ ಆಗಿದೆ.  ಶಿವ ಕಾರ್ತಿಕ್ ನಿರ್ದೇಶಿಸಿ, ಸೂರಪ್ಪ ಬಾಬು ನಿರ್ಮಿಸಿರುವ ಕಮರ್ಷಿಯಲ್ ಎಂಟರ್ನೈಮೆಂಟ್ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ.

ಅಕ್ಟೋಬರ್ 14 ರಂದು ಸಿನಿಮಾ ರಿಲೀಸ್ ಆಗಲಿದೆ, ಸೆಪ್ಟಂಬರ್ 2 ರಂದು ಸುದೀಪ್ ಹುಟ್ಟುಹಬ್ಬವಿದ್ದು, ಅಂದು ಚಿತ್ರತಂಡ ಅಧಿಕೃತ ಮಾಹಿತಿ ನೀಡಲಿದೆ.

ಮಾರ್ಚ್ ನಲ್ಲಿ ಆಡಿಯೋ ಬಿಡುಗಡೆ ಮಾಡಲು ನಿರ್ಧರಿಸಿದ್ದ ಚಿತ್ರತಂಡ ಏಪ್ರಿಲ್ ಕೊನೆಯ ವಾರದಲ್ಲಿ ಸಿನಿಮಾ ರಿಲೀಸ್ ಮಾಡಲು ಪ್ಲಾನ್ ಮಾಡಿತ್ತು, ಆದರೆ ಕೊರೋನಾ ಎರಡನೇ ಅಲೆಯಿಂದಾಗಿ ಬಿಡುಗಡೆಯ ಡೇಟ್ ಮುಂದೂಡಲಾಯಿತು.

ಈಗ ಚಿತ್ರಮಂದಿರಗಳು ಶೇ.100 ಸಾಮರ್ಥ್ಯದಲ್ಲಿ ಪುನಃ ತೆರೆಯಲ್ಪಡುತ್ತಿರುವುದರಿಂದ ಕೋಟಿಗೊಬ್ಬ 3 ರಿಲೀಸ್ ಮಾಡಲು ನಿರ್ಧರಿಸಲಾಗಿದೆ. ಚಿತ್ರದ ಸ್ಯಾಟಲೈಟ್, ಡಿಜಿಟಲ್ ಮತ್ತು ಹಿಂದಿ ಡಬ್ಬಿಂಗ್ ಹಕ್ಕುಗಳನ್ನು ಭಾರೀ ಮೊತ್ತಕ್ಕೆ ಮಾರಾಟ ಮಾಡಲಾಗಿದೆ.

ಈ ಚಿತ್ರದ ಮೂಲಕ ಮಲಯಾಳಂ ನಟಿ ಮಡೋನಾ ಸೆಬಾಸ್ಟಿಯನ್ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಕೋಟಿಗೊಬ್ಬ 3 ಸಿನಿಮಾದಲ್ಲಿ ಬಾಲಿವುಡ್ ನಟರಾದ ಶ್ರದ್ಧ ದಾಸ್, ಅಫ್ತಾಬ್ ಶಿವದಾಸನಿ ಮತ್ತು ರವಿಶಂಕರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕೋಟಿಗೊಬ್ಬ 3 ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು, ಶೇಖರ್ ಚಂದ್ರು ಅವರ ಛಾಯಾಗ್ರಹಣವಿದೆ.

Share and Enjoy !

Shares