ವಿಜಯನಗರ ವಾಣಿ ಸುದ್ದಿ
ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗಿನ 7.5 ಕಿ ಮೀ ಮೆಟ್ರೋ ನೇರಳೆ ಮಾರ್ಗವನ್ನು ಇಂದು ಬೆಂಗಳೂರಿನಲ್ಲಿ ಕೇಂದ್ರ ವಸತಿ, ನಗರ ವ್ಯವಹಾರ, ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದಿಪ್ ಸಿಂಗ್ ಪುರಿ ಅವರೊಂದಿಗೆ ಹಸಿರು ನಿಶಾನೆ ತೋರುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ , ಸಚಿವ ಆರ್. ಅಶೋಕ್, ವಿ.ಸೋಮಣ್ಣ, ಎಸ್.ಟಿ.ಸೋಮಶೇಖರ, ಕೆ.ಗೋಪಾಲಯ್ಯ, ಮುನಿರತ್ನ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಶಾಸಕರಾದ ಮುನಿರಾಜುಗೌಡ, ಲೆಹರ್ ಸಿಂಗ್ ಸಿರೋಯಾ, ಹಿರಿಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.