ರಾಯಚೂರು;ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಅಜೀಮ್ ಪ್ರೇಮ್‌ಜೀ ಫೌಡೇಶನ್ ವತಿಯಿಂದ ಹಮ್ಮಿಕೊಳ್ಳಲಾದ ಕೋವಿಡ್ -೧೯ರ ಲಸಿಕೆ ಜಾಗೃತಿ ವಾಹನಕ್ಕೆ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಅವರು ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಜಿಲ್ಲಾಡಳಿತ ಆರೋಗ್ಯ ಸಚಿವರ ನಿರ್ದೇಶನದಂತೆ ಜಿಲ್ಲೆಯಲ್ಲಿ ಪ್ರತಿ ದಿನ ೨೫ ಸಾವಿರ ಮತ್ತು ಮಹಾ ಲಸಿಕಾ ಅಭಿಯಾನದ ದಿನಗಳಾದ ಪ್ರತಿ ಬುಧವಾರ ಮತ್ತು ಶುಕ್ರವಾರ ೫೦ ಸಾವಿರ ಫಲಾನುಭವಿಗಳಿಗೆ ಲಸಿಕೆ ನೀಡಲು ಗುರಿ ನಿಗದಿ ಮಾಡಲಾಗಿದೆ. ಜಿಲ್ಲೆಯಲ್ಲಿ ನೀಡಿರುವ ಗುರಿ ತಲುಪಲು ಜಾಗೃತಿ ಅಗತ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿ ಗ್ರಾಮ ಮತ್ತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಲಸಿಕೆ ಬಗ್ಗೆ ಜಾಗೃತಿ ಮೂಡಿಸವ ನಿಟ್ಟಿನಲ್ಲಿ ಜಾಗೃತಿ ವಾಹನಕ್ಕೆ ಚಾಲನೆ ನೀಡಲಾಗಿದೆ ಎಂದರು.
ಜಿಲ್ಲಾಡಳಿತ ೧೮ ವರ್ಷ ಮೆಲ್ಪಟ್ಟ ಪ್ರತಿಯೊಬ್ಬ ಫಲಾನುಭವಿಗಳಗೆ ಶೇಕಡಾ ೧೦೦ರಷ್ಟು ಲಸಿಕೆ ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಜನ ಸಂದ್ರತೆ ಕೇಂದ್ರಗಳಲ್ಲಿ ಲಸಿಕೆ ಕೇಂದ್ರಗಳನ್ನು ಆರಂಭ ಮಾಡಿದ್ದು, ೧೮ ವರ್ಷ ಮೆಲ್ಪಟ್ಟ ಪ್ರತಿಯೊಬ್ಬ ಫಲಾನುಭವಿ ಕನಿಷ್ಟ ಒಂದು ಲಸಿಕೆ ಆಕ್ಟೋಬರ್ ಅಂತ್ಯದೊಳಗೆ ಪಡೆದುಕೊಳ್ಳಬೇಕು ಎಂದು ಹೇಳಿದರು.
ಲಸಿಕೆ ಅಭಿಯಾನದಲ್ಲಿ ಭಾರತೀಯ ವೈಧ್ಯಕೀಯ ಸಂಘ ಹಾಗೂ ನರ್ಸಿಂಗ್ ಹೋಂ ಅಸೋಸಿಯೇಷನ್ ಮತ್ತು ಸ್ವಯಂ ಸೇವ ಸಂಸ್ಥೆಗಳ ಸಿಬ್ಬಂದಿಗಳನ್ನು ಮಹಾ ಲಸಿಕೆ ಅಭಿಯಾನದಲ್ಲಿ ಪಾಲ್ಗೊಂಡಿದ್ದು ಸ್ವಾಗತರ್ಹ ಎಂದು ಮಾತನಾಡಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಶೇಖ್ ತನ್ವೀರ್ ಆಸೀಪ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಕೆ. ನಾಗರಾಜ್, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಸುರೇಂದ್ರ ಬಾಬು, ಆರ್. ಸಿ. ಹೆಚ್ ಅಧಿಕಾರಿ ಡಾ. ವಿಜಯ ಸೇರಿದಂತೆ ಇತರರು ಇದ್ದರು.