ಮಣ್ಣಿನ ಗಣೇಶ ಮೂರ್ತಿ ಪೂಜಿಸಿ ಪರಿಸರವನ್ನು ಸಂರಕ್ಷಿಸಿ: ಪಾಲಿಕೆ ಆಯುಕ್ತೆ ಪ್ರೀತಿ ಗೇಹ್ಲೋಟ್

Share and Enjoy !

Shares
Listen to this article

ಬಳ್ಳಾರಿ:ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ)ನಿಂದ ತಯಾರಿಸಿದ ಗಣೇಶ ಮೂರ್ತಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ) ಹಾಗೂ ರಾಸಾಯನಿಕ ಬಣ್ಣಗಳ ಲೇಪನದಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಉಪಯೋಗಿಸುವುದನ್ನು ನಿಷೇಧಿಸಿದೆ. ಮಣ್ಣಿನಿಂದ ಹಾಗೂ ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಪೂಜಿಸಬೇಕು ಎಂದು ಅವರು ತಿಳಿಸಿದ್ದಾರೆ.
ನೀರಿನ ಮೂಲಗಳನ್ನು ಸಂರಕ್ಷಣೆ ಮಾಡಲು ನಗರದಲ್ಲಿ ಹಾದು ಕೋಗುವ ತುಂಗಭದ್ರ ಕಾಲುವೆಯಲ್ಲಿ ನಿಗಧಿಪಡಿಸಿದ ಸ್ಥಳಗಳಾದ ಬೆಂಗಳೂರು ರಸ್ತೆ, ತಾಳೂರು ರಸ್ತೆ, ಕಪ್ಪಗಲ್ಲು ರಸ್ತೆ, ಹೊಸಪೇಟೆ ರಸ್ತೆಯ ಅಲ್ಲಿಪುರ, ಬೆಳಗಲ್ಲು ರಸ್ತೆ(ಡಿ.ಸಿ.ನಗರ), ಸಿರುಗುಪ್ಪ ರಸ್ತೆ ಹವಂಭಾವಿ, ಬಂಡಿಹಟ್ಟಿ ಆಲದಹಳ್ಳಿ ರಸ್ತೆ ಹಾಗೂ ಭತ್ರಿ ಸ್ಥಳಗಳಲ್ಲಿಯೇ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಿ ಪರಿಸರ ಸಂರಕ್ಷಿಸಬೇಕೆಂದು ಅವರು ಕೋರಿದ್ದಾರೆ.

Share and Enjoy !

Shares