ಅವಳಿ ಜಿಲ್ಲೆಗಳಲ್ಲಿ ಬೃಹತ್ ಕೋವಿಡ್ ಲಸಿಕಾ ಅಭಿಯಾನ ಹೊಸಪೇಟೆಯಲ್ಲಿ ಲಸಿಕಾ ಅಭಿಯಾನ ಯಶಸ್ವಿಗೆ ನೋಡಲ್ ಅಧಿಕಾರಿಗಳ ನೇಮಕ

Share and Enjoy !

Shares
Listen to this article

ಹೊಸಪೇಟೆ(ವಿಜಯನಗರ): ಇದೇ 17ರಂದು ರಾಜ್ಯಾದ್ಯಂತ ಬೃಹತ್ ಪ್ರಮಾಣದದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಕೋವಿಡ್ ಲಸಿಕಾ ಅಭಿಯಾನ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಹೊಸಪೇಟೆ ನಗರದ ವಾರ್ಡ್‍ಗಳು, ಗ್ರಾಮೀಣ ಮತ್ತು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಲು ತಾಲೂಕು ಮಟ್ಟದ ಅಧಿಕಾರಿಗಳನ್ನು ನೋಡೆಲ್ ಅಧಿಕಾರಿ/ಮೇಲ್ವಿಚಾರಣಾಧಿಕಾರಿಗಳನ್ನಾಗಿ ನಿಯೋಜಿಸಿ ಹೊಸಪೇಟೆ ಸಹಾಯಕ ಆಯುಕ್ತರಾದ ಸಿದ್ದರಾಮೇಶ್ವರ ಅವರು ಆದೇಶ ಹೊರಡಿಸಿದ್ದಾರೆ.
ನೋಡಲ್ ಅಧಿಕಾರಿಗಳ ವಿವರ: ಹೊಸಪೇಟೆ ನಗರಸಭೆಯ ಪೌರಾಯುಕ್ತ ಮನ್ಸೂರ್ ಅಲಿ, ಹೊಸಪೇಟೆ ನಗರಸಭೆಯ ಎಇಇ ಮನ್ಸೂರ್ ಅಹ್ಮದ್, ಲೊಕೋಪಯೋಗಿ ಇಲಾಖೆಯ ಉಪವಿಭಾಗದ ಎಇಇ ಕಿಶೋರಕುಮಾರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂಜೀವ ಪಾಟೀಲ್, ಪಂಚಾಯತ್ ರಾಜ್ ಇಲಾಖೆಯ ಉಪವಿಭಾಗದ ಎಇಇ ಸುರೇಶ, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಇಲಾಖೆಯ ಎಇ ವೈಕುಂಠಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಸುನಂದಾ, ಹೊಸಪೇಟೆ ತಾಪಂ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಹೆಚ್.ಆರ್ ಪರಮೇಶಲು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಉಪವಿಭಾಗದ ಎಇಇ ಪಂಪಾಪತಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಬೀರೇಂದ್ರ, ಲೊಕೋಪಯೋಗಿ ಇಲಾಖೆಯ ಉಪವಿಭಾಗದ ಎಇ ಚಂದ್ರಕಾಂತ, ಲೊಕೋಪಯೋಗಿ ಇಲಾಖೆಯ ಉಪವಿಭಾಗದ ಎಇ ರವಿನಾಯ್ಕ್, ಲೊಕೋಪಯೋಗಿ ಇಲಾಖೆಯ ಉಪವಿಭಾಗದ ಎಇ ಲಕ್ಷ್ಮಣ ನಾಯ್ಕ್, ಕುಡಿಯುವ ನೀರು ಸರಬರಾಜು ಇಲಾಖೆಯ ಉಪವಿಭಾಗದ ಎಇ ಸತೀಶ್ ವಂಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕರಾದ ಮಲ್ಲೇಶಪ್ಪ,ಬಸವರಾಜ್ ಮತ್ತು ಟಿ.ಕೆ. ವೆಂಕಟೇಶ ರೆಡ್ಡಿ, ಪಂಚಾಯತ್ ರಾಜ್ ಎಒ ಮದಾನಿ, ಕಮಲಾಪುರ ಪಟ್ಟಣ ಪಂಚಾಯ್ತಿ ಮುಖ್ಯ ಅಧಿಕಾರಿ ನಾಗೇಶ್, ಮರಿಯಮ್ಮನಳ್ಳಿ ಪಟ್ಟಣ ಪಂಚಾಯ್ತಿ ಮುಖ್ಯ ಅಧಿಕಾರಿ ಫಕ್ರುದ್ದೀನ್, ತಾಪಂ ಇಒ ವಿಶ್ವನಾಥ, ತಾಪಂ ನರೇಗಾ ಸಹಾಯಕ ನಿರ್ದೇಶಕ ಉಮೇಶ, ಶಂಕರ್ ಆನಂದ್ ಸಿಂಗ್ ಕಾಲೇಜಿನ ಉಪನ್ಯಾಸಕರಾದ ಡಾ.ವೆಂಕಟೇಶ, ಹಂಪಿನಕಟ್ಟೆ ಸರಕಾರಿ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಓಬಯ್ಯ, ಸಮಾಜ ಕಲ್ಯಾಣಾಧಿಕಾರಿಗಳಾದ ವಸಂತಕುಮಾರ, ಚಿತ್ತವಾಡ್ಗಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಚಾರ್ಯರಾದ ಶ್ರೀಧರ ಬಿ.ವಿ, ಬಿ.ಸಿ.ಎಂ ನ ವಿಸ್ತಾರಣಾಧಿಕಾರಿ ಹೆಚ್.ಹೆಚ್ ನಡುವಿನಮನಿ, 15ನೇ ವಾರ್ಡಿನ ಸಕಾರಿ ಪ್ರೌಢಶಾಲೆಯ ಮಖ್ಯ ಗುರುಗಳಾದ ಅಯ್ಯಪ್ಪ, ಮರಿಯಮ್ಮನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೆ.ಎಸ್ ಅಬ್ದುಲ್ ಸಮದ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಶಂಕರ, ಶಂಕರ್ ಆನಂದ್ ಸಿಂಗ್ ಕಾಲೇಜಿನ ಉಪನ್ಯಾಸಕರಾದ ಟಿ.ಹೆಚ್ ಬಸವರಾಜು ಅವರುಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ನೇಮಿಸಲಾಗಿರುವ ಎಲ್ಲಾ ನೋಡಲ್ ಅಧಿಕಾರಿಗಳು ಕೂಡಲೇ ಹೊಸಪೇಟೆ ತಾಲೂಕು ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಿ ತಮಗೆ ನಿಯೋಜಿಸಲಾದ ಪ್ರದೇಶಗಳಲ್ಲಿ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಸೂಕ್ತ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳುವುದು ಹಾಗೂ ಕೈಗೊಂಡ ಕ್ರಮದ ಬಗ್ಗೆ ಕಚೇರಿಗೆ ವರದಿ ನೀಡಬೇಕು. ಬೃಹತ್ ಲಸಿಕಾ ಕಾರ್ಯಕ್ರಮಕ್ಕೆ ನಿಯೋಜಿಸಲಾದ ಡಾಟಾ ಎಂಟ್ರಿ ಆಪರೇಟರ್ಗಳಿಗೆ ಈಗಾಗಲೇ ತರಬೇತಿ ನೀಡಲಾಗಿದ್ದು, ಅವರು ಕರ್ತವ್ಯಕ್ಕೆ ವರದಿ ಮಾಡಿಕೊಂಡ ಬಗ್ಗೆ ಹಾಗೂ ಅವರಿಗೆ ವಹಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಸೂಕ್ತ ನಿರ್ದೇಶನಗಳನ್ನು ನೀಡಿರುವ ಬಗ್ಗೆ ಕಚೇರಿಗೆ ಮಾಹಿತಿ ನೀಡಬೇಕು. ಸೆ.17 ರಂದು ಬೆಳಿಗ್ಗೆ 7 ಗಂಟೆಯಿಂದ ನಡೆಯುವ ಬೃಹತ್ ಲಸಿಕಾ ಕಾರ್ಯಕ್ರಮ ಪ್ರದೇಶದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಜೇಷ್ಠತೆಯನುಸಾರ ಲಸಿಕೆಗೆ ಕ್ರಮವಹಿಸಬೇಕು. ಹೊಸಪೇಟೆ ತಾಲೂಕಿನ ಎಲ್ಲಾ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಅವರ ವ್ಯಾಪ್ತಿಯ ಗ್ರಾಮಗಳಲ್ಲಿ ಲಸಿಕಾ ಅಭಿಯಾನದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳುವುದರ ಜೊತೆಗೆ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಯನ್ನು ಕೈಗೊಳ್ಳಬೇಕು ಹಾಗೂ ಈ ಬಗ್ಗೆ ಸಂಬಂಧಪಟ್ಟ ನೋಡಲ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಕೋವಿಡ್-19 ಲಸಿಕಾ ಅಭಿಯಾನಕ್ಕೆ ಸಂಬಂಧಿಸಿದಂತೆ ಸರ್ಕಾರವು ಹಾಗೂ ಜಿಲ್ಲಾಡಳಿತವು ಹೊರಡಿಸುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು ಎಂದು ಅವರು ತಮ್ಮ ಆದೇಶದಲ್ಲಿ ಸೂಚನೆ ನೀಡಿದ್ದಾರೆ.

Share and Enjoy !

Shares