ವಿಜಯನಗರ ವಾಣಿ ಸುದ್ದಿ:
ರಾಯಚೂರು ಜಿಲ್ಲೆ
ಸಿಂಧನೂರು:ತಾಲೂಕಿನ ಕುನ್ನಟಗಿ ಗ್ರಾಮದಲ್ಲಿ ಕಳೆದ 2 ದಿನಗಳಿಂದೆ ಎರಡು ಕೋಮಿನ ಮಧ್ಯ ಮಾರ ಮಾರಿ ನಡೆದಿತ್ತು. ಈ ಗಲಾಟೆಯಲ್ಲಿ ಮಾರಣಾಂತಿಕ ಹಲ್ಲೆಗೆ ಒಳಪಟ್ಟ ಗಾಯಾಳುಗಳನ್ನು ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಜಮದಗ್ನಿ
ಕುನ್ನಟಗಿ ಸುಮಾರು 30 ವಯಸ್ಸಿನ ವ್ಯಕ್ತಿಗೆ ತಲೆಗೆ ಬಲವಾದ ಪೆಟ್ಟು ಬಿದ್ದದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ರೀಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.ಅಲ್ಲಿಯೂ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯಲು ಶಿಫಾರಸ್ಸು ಮಾಡಲಾಗಿತ್ತು.ಆದರೆ
ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯದಲ್ಲಿ ಜಮದಗ್ನಿ ಕುನ್ನಟಗಿ ಮೃತಪಟ್ಟಿದ್ದು ಮರಣೋತ್ತರ ಪರೀಕ್ಷೆಗಾಗಿ ಬಳ್ಳಾರಿಯ ರೀಮ್ಸ್ ಆಸ್ಪತ್ರೆಗೆ ಶವವನ್ನು ತರಲಾಗಿದೆ ಎಂದು ತಿಳಿದುಬಂದಿದ್ದು ಇತ್ತಾ ಕುನ್ನಟಗಿ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಕುನ್ನಟಗಿ ಗ್ರಾಮದಲ್ಲಿ ಸಿಪಿಐ ಉಮೇಶ್ ಎನ್ ಕಾಂಬ್ಳೆ ನೇತೃತ್ವದಲ್ಲಿ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ.