ವಿಜಯನಗರ ವಾಣಿ ಸುದ್ದಿ ರಾಯಚೂರು
ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಈಶ್ವರ ದೇವಸ್ಥಾನದಲ್ಲಿ ಕಳ್ಳನೊಬ್ಬ ಕಾಣಿಕೆ ಹುಂಡಿ ಕಳ್ಳತನ ಘಟನೆ ಸೋಮವಾರ ಬೆಳಿಗ್ಗೆ ಜರುಗಿದೆ.
ಮಾಸ್ಕ ಧರಿಸಿಕೊಂಡ ಹಾಗೂ ಟವಲ್‌ನಿಂದ ಮುಖ ಮುಚ್ಚಿಕೊಂಡ ವ್ಯಕ್ತಿಯೊಬ್ಬ ದೇವಸ್ಥಾನದ ಕಾಣಿಕೆ ಹುಂಡಿಯ ಕೀಲಿ ಮುರಿದು ಅದರಲ್ಲಿದ್ದ ಹಣವನ್ನು ದೋಚಿ ಪರಾರಿಯಾದ ದೃಶ್ಯ ದೇವಸ್ಥಾನದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ಬಗ್ಗೆ ದೇವಸ್ಥಾನ ಸಮಿತಿಯವರು ಪೋಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.