ವಿಜಯನಗರವಾಣಿ ಸುದ್ದಿ ರಾಯಚೂರು ಜಿಲ್ಲೆ
ಲಿಂಗಸುಗೂರು ವಿಧಾನಸಭಾ ಕ್ಷೇತ್ರ. ಶಾಸಕರಾದ ಡಿ ಎಸ್ ಹುಲಿಗೇರಿ ಇಂದು ಪಟ್ಟಣದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಇಂದು ಭೇಟಿ ನೀಡಿ ಕಾಲೇಜು ಅಭಿವೃದ್ಧಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇರುವ ಕುಂದು ಕೊರತೆಗಳನ್ನು ಆಲಿಸಿ ಹಾಗೂ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತೆಗೆದುಕೊಂಡು ಹಾಗೂ ಇನ್ನೂ ಹೆಚ್ಚಿನ ರೀತಿಯಲ್ಲಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿಗಾಗಿ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸುವುದಾಗಿ ಶಾಸಕರು ಸದಸ್ಯರುಗಳಿಗೆ ತಿಳಿಸಿದರು
ಈ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಸಿಬ್ಬಂದಿ ವರ್ಗ ಮತ್ತು ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷರಾದ ಭೂಪನಗೌಡ ಪಾಟೀಲ್ ಕಡಕಲ್ ಗುಂಡಪ್ಪ ನಾಯಕ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು. ಮಹಮ್ಮದ್ ರಫಿ ಪುರಸಭೆಯ ಉಪಾಧ್ಯಕ್ಷರು ಲಿಂಗಸುಗೂರು, ಮಲ್ಲಣ್ಣ ವಾರದ ಇತರರು ಸದಸ್ಯರು ಉಪಸ್ಥಿತರಿದ್ದರು.