ಸಿಎಂ ಮಂಡಿ ನೋವಿಗೆ ನಾಟಿ ವೈದ್ಯರ ಚಿಕಿತ್ಸೆ

Share and Enjoy !

Shares
Listen to this article

ವಿಜಯನಗರ ವಾಣಿ ಸುದ್ದಿ

 

ಹುಬ್ಬಳ್ಳಿ: ಮಂಡಿ ನೋವಿನಿಂದ ಬಲಳುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಬೆಳಗಾವಿ ಅಧಿವೇಶನದ ವೇಳೆ ಮೈಸೂರು ಮೂಲದ ನಾಟಿ ವೈದ್ಯ ಲೋಕೇಶ ಟೆಕಲ್ ಎನ್ನುವವರು ಚಿಕಿತ್ಸೆ ನೀಡಿದ್ದಾರೆ.

ಮಂಡಿ ನೋವಿನ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳು ಅಮೆರಿಕೆಗೆ ತೆರಳುತ್ತಿದ್ದಾರೆಂಬ ಗುಸು ಗುಸು ಸುದ್ದಿಯ ಮಧ್ಯೆಯೇ ಮಾಜಿ ಡಿಸಿಎಂ ಲಕ್ಷö್ಮಣ ಸವದಿಯವರಿಗೆ ಚಿಕಿತ್ಸೆ ನೀಡಿ ಗುಣಮುಖಗೊಳಿಸಿದ್ದ ಟೆಕಲ್ ಎನ್ನುವವರನ್ನು ಸಂಪರ್ಕಿಸಿ ಮಂಡಿ ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದ್ಯ ಮುಖ್ಯಮಂತ್ರಿ ಬೊಮ್ಮಾಯಿಯವರು ಮಂಡಿ ನೋವಿನಿಂದ ಗುಣಮುಖರಾಗುತ್ತಿದ್ದು, ದಿನಕ್ಕೆ ಎರಡು ಬಾರಿ ಔಷಧದ ಜತೆಗೆ ಮೇಕೆ ಹಾಲು ಕುಡಿಯುವಂತೆ ನಾಟಿ ವೈದ್ಯರು ಸಲಹೆ ನೀಡಿದ್ದಾರೆ.

ಲೋಕೇಶ ಅವರು ಈಗಾಗಲೇ ಕ್ಯಾನ್ಸರ್, ಬ್ಲಾಕ್ ಫಂಗಸ, ಕೊರೊನಾ ಸೇರಿದಂತೆ ವಿವಿಧ ಖಾಯಿಲೆಗಳಿಗೆ ವನಸ್ಪತಿ ಔಷಧ ನೀಡಿ ಯಶಸ್ವಿಯಾಗಿದ್ದಾರೆ.

 

Share and Enjoy !

Shares