ಕಾರ್ಯನಿರ್ವಾಹಕ ಅಧಿಕಾರಿ ಮೇಲೆ ಹಲ್ಲೆ ಖಂಡಿಸಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ತಹಶೀಲ್ದಾರರಿಗೆ ಮನವಿ.

Share and Enjoy !

Shares
Listen to this article

ವಿಜಯನಗರವಾಣಿ
ಸಿರಗುಪ್ಪ:ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಇವರ ಮೇಲೆ ನಡೆದ ಹಲ್ಲೆ ಖಂಡಿಸಿ ತಹಶಿಲ್ದಾರಿರಗೆ ಮನವಿ ನೀಡಿದರು.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾ” ಅಧ್ಯಕ್ಷ ಬಸವರಾಜ ಮಾತನಾಡಿ ಮೊನ್ನೆ ಚಳ್ಳಕೆರೆಯ ಕಾರ್ಯನಿರ್ವಾಹಕ ಅಧಿಕಾರಿ ಮೇಲೆ ಕೆಲ ನಿವಾಸಿಗಳು ಕಚೇರಿಗೆ ನುಗ್ಗಿ ಏಕಾಏಕಿ ದಾಂಧಲೆ ಮಾಡಿ ಅಧಿಕಾರಿಯ ಮೇಲೆ ದೈಹಿಕ ಹಲ್ಲೆ ಮಾಡಿರುವುದು ಖಂಡನೀಯ ಇದರಿಂದ ಸರ್ಕಾರಿ ನೌಕರರು ನಿರ್ಭಿತರಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಈ ಕೃತ್ಯವನ್ನು ಸಮಸ್ತ ರಾಜ್ಯ ಸರ್ಕಾರಿ ನೌಕರರು ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘವು ತೀವ್ರವಾಗಿ ಖಂಡಿಸುತ್ತದೆ. ಕಾರಣ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಂಡು ಸಮಾಜದಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕಠಿಣ ಕಾನೂನು ಜಾರಿಗೊಳಿಸಿ ಸರ್ಕಾರಿ ನೌಕರರಿಗೆ ಕರ್ತವ್ಯ ನಿರ್ವಹಿಸಲು ನಿರ್ಭಯತೆಯ ವಾತಾವರಣ ಸೃಷ್ಟಿಸುವಂತಹ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಇರುವ ಮನವಿ ಪತ್ರವನ್ನು ಮಾನ್ಯ ಮುಖ್ಯ ಕಾರ್ಯದರ್ಶಿಗಳು ಕರ್ನಾಟಕ ಸರ್ಕಾರ ವಿಧಾನ ಸೌಧ ಬೆಂಗಳೂರು ಇವರಿಗೆ ತಹಸೀಲ್ದಾರರ ಮೂಲಕ ಸಲ್ಲಿಸಿದರು
ಮನವಿ ಪತ್ರ ಸ್ವೀಕರಿಸಿದ ತಹಸೀಲ್ದಾರರು ಸರ್ಕಾರಿ ಅಧಿಕಾರಿಗಳ ಮೇಲೆ ಕೈ ಮಾಡುವ ಪುಂಡ ಕೋರರಿಗೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಕಚೇರಿ ಪಶು ಚಿಕಿತ್ಸಾಲಯ ಸರ್ಕಾರಿ ಆಸ್ಪತ್ರೆ ಸಿಡಿಪಿಒ ಕಚೇರಿ ತೋಟಗಾರಿಕೆ ಇಲಾಖೆ ಕೃಷಿ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ ಬಿಸಿಎಂ ಇಲಾಖೆ ಅಲ್ಪಸಂಖ್ಯಾತರ ಇಲಾಖೆ ಸೇರಿದಂತೆ ಅನೇಕ ಇಲಾಖೆಗಳ ಹಿರಿಯ ಮತ್ತು ಕಿರಿಯ ಅಧಿಕಾರಿಗಳು ಧರಣಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Share and Enjoy !

Shares