ಬೆಂಗಳೂರು, ಫೆ: 20 : ಕಂಪ್ಲಿ ತಾಲೂಕನ್ನ ವಿಜಯನಗರ ಜಿಲ್ಲೆಗೆ ಸೇರ್ಪಡಿಸುವಂತೆ ಸಲ್ಲಿಸಲಾಗಿದ್ದ ಪಿಐಎಲ್ ನ ಪ್ರಕರಣವು ಹೈ ಕೋರ್ಟ್ ನ ರಿಜಿಸ್ಟ್ರಾರ್ ಮುಂದೆ ವಿಚಾರಣೆಗೆ ಬಂದಿದ್ದು 6 ವಾರಗಳ ಕಾಲ ವಿಚಾರಣೆಯನ್ನ ಮುಂದೂಡಲಾಯಿತೆಂದು ಅರ್ಜಿದಾರರಾದ ವಕೀಲ ಮೋಹನ್ ಕುಮಾರ್ ದಾನಪ್ಪ ತಿಳಿಸಿದರು.
ಕಂಪ್ಲಿ ತಾಲೂಕನ್ನು ವಿಜಯನಗರ ಜಿಲ್ಲೆಗೆ ಸೇರಿಸದೇ ಕೈ ಬಿಟ್ಟಿರುವುದನ್ನು ಪ್ರಶ್ನಿಸಿ ಸರ್ಕಾರದ ಅಧಿಸೂಚನೆಯನ್ನ ರದ್ದು ಪಡಿಸಿ ಕಂಪ್ಲಿ ತಾಲೂಕನ್ನು ವಿಜಯನಗರ ಜಿಲ್ಲೆಗೆ ಸೇರ್ಪಡಿಸುವಂತೆ ರಾಜ್ಯ ಹೈಕೋರ್ಟ್‌ನಲ್ಲಿ 2021 ಮಾರ್ಚ್ 10 ರಂದು ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಬಳ್ಳಾರಿ ಜಿಲ್ಲಾ ಗೌರವಾಧ್ಯಕ್ಷ ವಕೀಲ ಮೋಹನ್ ಕುಮಾರ್ ದಾನಪ್ಪ ಮತ್ತು ಕಂಪ್ಲಿ ತಾಲೂಕು ವಕೀಲರ ಬಳಗದ ಕಾರ್ಯಾಧ್ಯಕ್ಷರಾದ ಹಿರಿಯ ವಕೀಲ ಕೆ. ಪ್ರಭಾಕರ್ ರಾವ್ ಹಾಗೂ ಇತರರು ಸಾರ್ವಜನಿಕ ಹಿತಾಸಕ್ತಿ ಪಿಐಎಲ್ ಅರ್ಜಿಯನ್ನು ಸಲ್ಲಿಸಿದ್ದರು