ವಿಶ್ವಗುರು ಬಸವೇಶ್ವರ ಜಯಂತಿ ಆಚರಣೆ

Share and Enjoy !

Shares
Listen to this article

ವಿಜಯನಗರವಾಣಿ ಸುದ್ದಿ
ಕುರುಗೋಡು:ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ವಿಶ್ವಗುರು ಬಸವ ಜಯಂತಿಯನ್ನು ಬುಧವಾರ ಬಸವೇಶ್ವರರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡಿದ ವೀರೇಂದ್ರ ಗೌಡ ಕರ್ನಾಟಕದ ಪಾಲಿಗೆ ಹನ್ನೆರಡನೇ ಶತಮಾನ ಎಂಬುದು ಬಹಳ ಮಹತ್ವದ್ದು. ಸಮಾಜದಲ್ಲಿ ಬಹುದೊಡ್ಡ ಬದಲಾವಣೆಯ ಹೊಸ ಚಿಂತನೆ ರೂಪುಗೊಂಡ ಕಾಲವದು. ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಇತಿಹಾಸದಲ್ಲಿ ವಿಶಿಷ್ಟವಾದ ಕಾಲಘಟ್ಟವಿದು. ಸಾಮಾಜಿಕ ಅಸಮಾನತೆ, ಜಾತಿ ವ್ಯವಸ್ಥೆ ಸೇರಿದಂತೆ ಹಲವು ಅನಿಷ್ಟ ಪದ್ಧತಿಗಳು ಆಚರಣೆಯಲ್ಲಿದ್ದ ಈ ಕಾಲದಲ್ಲಿ ವಚನಕಾರರು ತಮ್ಮ ಸರಳ ವಚನಗಳ ಮೂಲಕ ಸಮಾಜದಲ್ಲಿ ಬದಲಾವಣೆಯನ್ನು ತರಲು ಪ್ರಯತ್ನಿಸಿದ್ದರು. ಜಾತಿಯ ಹಂಗಿಲ್ಲದೆ ಎಲ್ಲಾ ವರ್ಗದ ವಚನಕಾರರು ವಚನಗಳ ಮೂಲಕ ತಮ್ಮ ಹೊಸ ಚಿಂತನೆಗಳನ್ನು ಕಟ್ಟಿಕೊಡುತ್ತಿದ್ದರು. ಈ ಮೂಲಕ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಇವರು ಮಾಡುತ್ತಿದ್ದರು ಎಂದು ಹಲವು ವಚನಗಳ ಸಾರವನ್ನು ವಿವರಿಸಿದರು.
ನಂತರ ಮಾತನಾಡಿದ ಗುಂಡಪ್ಪನವರ ನಾಗರಾಜ್ ಬುದ್ದ , ಬಸವ , ಅಂಬೇಡ್ಕರ್, ಯಾವುದೇ ಜಾತಿಗೆ ಸೀಮಿತವಾದ ವ್ಯಕ್ತಿಗಳಲ್ಲ ಅವರೆಲ್ಲರೂ ವಿಶ್ವ ಮಾನವರು ಅವರು ತತ್ವ ಚಿಂತನೆಗಳು ಇಂದಿಗೂ ಪ್ರಸ್ತುತ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲಾ ಸಮುದಾಯದವರೂ ನಡೆಯಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ರಾಘವೇಂದ್ರ ರಾವ್ ರವರು ಮಾತನಾಡಿ.
ಕಾಯಕವೇ ಕೈಲಾಸ ತತ್ವದಡಿ ಎಲ್ಲರೂ ಸಮಾನರು ಯಾವುದೇ ಕೆಲಸದಲ್ಲಿ ಮೇಲು–ಕೀಳಿಲ್ಲ ಎಂದು ಸಾರಿದ ಬಸವಣ್ಣ ಅವರು ಸಾಮಾಜಿಕ ಕ್ರಾಂತಿಯ ಹರಿಕಾರರು ಹೌದು. ದೇಶದಲ್ಲಿ ಅನುಭವ ಮಂಟಪದ ಮೂಲಕ ಸಾಮೂಹಿಕ ಶಿಕ್ಷಣಕ್ಕೆ ಚಾಲನೆ ನೀಡಿದವರಲ್ಲಿ ಬಸವಣ್ಣ ಮೊದಲಿಗರು. ವಿದ್ಯೆಯಿಂದ ವಂಚಿರಾದವರಿಗೆ, ಮಹಿಳೆಯರಿಗೆ ಅಲ್ಲಿ ಶಿಕ್ಷಣ ಹಾಗೂ ಅಭಿಪ್ರಾಯ ವ್ಯಕ್ತಪಡಿಸಲು ಮುಕ್ತ ಅವಕಾಶ ಮಾಡಿಕೊಟ್ಟು ಸಾಮಾಜಿಕ ಬದಲಾವಣೆಗೆ ಕಾರಣರಾದರು ಎಂದು ತಿಳಿಸಿದರು..ಗವಿಸಿದ್ದಪ್ಪ ಅಲ್ಲನಗರ ಶಿಕ್ಷಕರು ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಸಂದರ್ಭದಲ್ಲಿ ವೀರಶೈವ ಸಮಾಜದ ಮುಖಂಡ ಉಮಾಪತಿಗೌಡ,ವಿಶ್ವ ನಾಥ ಸ್ವಾಮಿ
ನಿವೃತ್ತ ನೌ.ಸಂ.ಅಧ್ಯಕ್ಷ ಸದಾಶಿವ
ರೈತ ಮುಖಂಡ ಶಿವಶಂಕರ್,ಪುರಸಭೆ ಸದಸ್ಯರಾದ ಬುಟ್ಟ ಮಲ್ಲಿಕಾರ್ಜುನ , ಲಕ್ಷ್ಮೀ ವೆಂಕಟೇಶ ಗೌಡ,ಚನ್ನಪಟ್ಟಣ ಮಲ್ಲಿಕಾರ್ಜುನ, ನಟರಾಜ್,
ಹಾಗೂ ಸಮಾಜದ ಮುಖಂಡರು,ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share and Enjoy !

Shares