ಗಬ್ಬೂರು ಗ್ರಾಮಕ್ಕೆ ಆಗಮಿಸುತ್ತಿರುವ ಸಿದ್ದರಾಮಯ್ಯ ಅವರನ್ನು ಸ್ವಾಗತಕ್ಕೆ ಅಭಿಮಾನಿಗಳು ಮತ್ತು ಕಾರ್ಯಕ್ರಮ ಹೆಚಗಚಿನ ಸಂಖ್ಯೆಯಲ್ಲಿ ಭಾಗವಹಿಸಲು:ಅಯ್ಯಪ್ಪಗೌಡ ಗಬ್ಬೂರ್ ಕರೆ

ರಾಯಚೂರು :ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಯಾದಗಿರಿ, ರಾಯಚೂರು ಎರಡು ಜಿಲ್ಲೆಗೆ ಬರುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಗಳು ಹಾಗೂ ಯಾದಗಿರಿ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಅಯ್ಯಪ್ಪಗೌಡ ಗಬ್ಬೂರ್ ತಿಳಿಸಿದ್ದಾರೆ.
ದಿನಾಂಕ: 19 – 05-2022 ರಂದು ಯಾದಗಿರಿ ಜಿಲ್ಲೆಯ ಶಹಪೂರ ತಾಲ್ಲೂಕಿನ ಹೊಸಕೇರಾ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿತ್ತಿದ್ದು.
ಹಾಗೂ ದಿನಾಂಕ 20 -05 -2022 ರಂದು ರಾಯಚೂರು ನಗರದ ಗಂಜ್ ಸರ್ಕಲ್ ನಲ್ಲಿರುವ ದಾಸ ಶ್ರೇಷ್ಠ ಕನಕದಾಸರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಾಗೂ ದೇವದುರ್ಗ ತಾಲ್ಲೂಕಿನ ಗಬ್ಬೂರು ಗ್ರಾಮದಲ್ಲಿ ಗುರುವಿನ ಕುಟುಂಬದವರ ಮದುವೆ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು.ಯಾದಗಿರಿ, ರಾಯಚೂರು ಎರಡು ಜಿಲ್ಲೆಯ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿರೋಧ ಪಕ್ಷದ ನಾಯಕರು ಸಿದ್ದರಾಮಯ್ಯನವರಿಗೆ ಸ್ವಾಗತಿಸಿ ಸನ್ಮಾನಿಸಿ ಗೌರವಿಸಲು ಸಿದ್ದರಾಮಯ್ಯ ಅವರ ಅಭಿಮಾನಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು
ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಗಳು ಹಾಗೂ ಯಾದಗಿರಿ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಅಯ್ಯಪ್ಪಗೌಡ ಗಬ್ಬೂರ್ ಪತ್ರಿಕೆ ಪ್ರಕಟಣೆ ತಿಳಿಸಿದ್ದಾರೆ

Share and Enjoy !

Shares