ವಿಜಯನಗರವಾಣಿ ಸುದ್ದಿ
ಸಿರುಗುಪ್ಪ : ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2022-23 ನೇ ಸಾಲಿನ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಪ್ರವರ್ಗ-1 ,2ಎ,2ಬಿ,3ಎ,3ಬಿ.ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಅವದಿಯನ್ನು ಜೂ.30 ರವರೆಗೆ ವಿಸ್ತರಿಸಲಾಗಿದೆ. ಎಂದು ಸಿರುಗುಪ್ಪ ತಾಲೂಕು ಹಿಂದುಳಿದ ವರ್ಗಗಳಕಲ್ಯಾಣಾಧಿಕಾರಿ A.ಗಾದಿಲಿಂಗಪ್ಪ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿ ಜೂನ್ 30ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ,ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ www.bcwd.karnataka.gov.in ನ್ನು ನೋಡಬಹುದಾಗಿದ್ದು, ಅರ್ಜಿಸಲ್ಲಿಸುವಾಗ ತಾಂತ್ರಿಕ ತೊಂದರೆಗಳಾದಲ್ಲಿ www.bcwd.karnataka.gov.in ಇಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಕಚೇರಿವಿಳಾಸ: ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ,15ನೇ ವಾರ್ಡ್ ವಿನಾಯಕ ನಗರ, ಈಡಿಗರ ಸಿನಪ್ಪ ಲೇಔಟ್ ಸಿರುಗುಪ್ಪ