ಬೆಳ್ಳಂಬೆಳಗ್ಗೆ ಆರ್ ಟಿ.ಓ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಕಡತಗಳ ಪರಿಶೀಲನೆ

Share and Enjoy !

Shares
Listen to this article

ಬಳ್ಳಾರಿ ಸೆ. 30 : ಏಕಕಾಲಕ್ಕೆ ರಾಜ್ಯದ 9 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿವಿದ ಜಿಲ್ಲೆಗಳ ಆರ್ ಟಿಓ (RTO) ಚೆಕ್ ಪೋಸ್ಟ್ ಗಳ ಮೇಲೆ ಬೆಳಗ್ಗೆ 4 ಗಂಟೆಯಿಂದ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು ಅತ್ತಿಬೆಲೆ, ವಿಜಯಪುರದ ಜಳಲಿ ಪೋಸ್ಟ್, ಬೆಳಗಾವಿಯ ನಿಪ್ಪಾಣಿ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ, ಕೋಲಾರದ ನಂಗ್ಲಿ, ಬಳ್ಳಾರಿ, ಕೊಪ್ಪಳ, ಹೊಸಪೇಟೆ, ಗುಂಡ್ಲುಪೇಟೆ, ಬೀದರ್ ನ ಹುಮನಬಾದ್ ಚೆಕ್ ಪೋಸ್ಟ್ ಮೇಲೆ ದಾಳಿ ಮಾಡಿದ್ದಾರೆ.

ಚೆಕ್ ಪೋಸ್ಟ್ ಗಳಲ್ಲಿ ಮಧ್ಯವರ್ತಿಗಳು ಹಾಗೂ ಲಂಚಕ್ಕೆ ಬೇಡಿಕೆ ದೂರುಗಳು ಹೆಚ್ಚಾದ ಹಿನ್ನೆಲೆಯಲ್ಲಿ ಸುಮೋಟೋ ಪ್ರಕರಣ ದಾಖಲಿಸಿಕೊಂಡು ಲೋಕಾಯುಕ್ತ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ

ಬೆಂಗಳೂರು ಹೊರವಲಯದ ಅತ್ತಿಬೆಲೆ ಆರ್ ಟಿಒ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. 2 ವಾಹನಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆ 4 ಗಂಟೆಗೆ ಕಚೇರಿ ಮೇಲೆ ರೈಡ್ ಮಾಡಿದ್ದಾರೆ. ಅತ್ತಿಬೆಲೆ ಆರ್ ಟಿಒ ಕಚೇರಿ ಮೇಲೆ ಹಲವು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಕಚೇರಿ ಒಳಗೆ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.

ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಷಿ ನೇತೃತ್ವದಲ್ಲಿ 20 ಮಂದಿ ಅಧಿಕಾರಿಗಳ ತಡದಿಂದ ಪರಿಶೀಲನೆ ನಡೆಯುತ್ತಿದೆ.

Share and Enjoy !

Shares