ತಾಲೂಕು ಮಟ್ಟದ ಪ್ರತಿಭಾ ಕಾರಂಜಿ

Share and Enjoy !

Shares
Listen to this article

ಬಳ್ಳಾರಿ ಜಿಲ್ಲೆ ಸಿರುಗುಪ್ಪ.ನ.೧೨:- ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ಎಂ.ಎಸ್.ಸೋಮಲಿಂಗಪ್ಪ ತಿಳಿಸಿದರು.
ನಗರದ ವಿಶ್ವಜ್ಯೋತಿ ಶಾಲೆಯ ಸಭಾಂಗಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಮಕ್ಕಳಲ್ಲಿ ಅನೇಕರು ಪ್ರತಿಭಾವಂತರಿದ್ದು, ಅವರಲ್ಲಿ ಅನೇಕ ಕಲೆಗಳು ಅಡಗಿವೆ, ಈ ಕಲೆಗಳು ಅನಾವರಣಗೊಳ್ಳಲು ವೇದಿಕೆಯೊಂದು ಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ನಮ್ಮ ತಾಲೂಕಿನ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ ಸ್ಪರ್ದೆಮಾಡಿ ಬಹುಮಾನಗಳನ್ನು ಗೆದ್ದು ತಾಲೂಕಿನ ಕೀರ್ತಿಯನ್ನು ರಾಷ್ಟç ಮಟ್ಟದಲ್ಲಿ ಹೆಚ್ಚಿಸುವಂತೆ ಮಾಡಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಬಿ.ಇ.ಒ. ಪಿ.ಡಿ. ಭಜಂತ್ರಿ ಮಾತನಾಡಿ ತಾಲೂಕಿನಲ್ಲಿ ನಡೆಯುತ್ತಿರುವ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಸುಮಾರು ೭೦೦ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ಉತ್ತಮ ಪ್ರದರ್ಶನ ತೋರಿಸುವ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗುವುದೆಂದು ತಿಳಿಸಿದರು.
ನಗರಸಭೆ ಅಧ್ಯಕ್ಷೆ ಕೆ.ಸುಶೀಲಮ್ಮ, ತಹಶೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ, ತಾ.ಪಂ. ಇ.ಒ. ಎಂ.ಬಸಪ್ಪ, ತಾ.ನೋಡಲ್ ಅದಿಕಾರಿ ಚನ್ನಬಸವನಗೌಡ, ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸಲಿಂಗಪ್ಪ ಮತ್ತು ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು

Share and Enjoy !

Shares