ವಿಜಯನಗರವಾಣಿ ಸುದ್ದಿ
ಮರಿಯಮ್ಮನಹಳ್ಳಿ:ಪಟ್ಟಣದ12ನೇ ವಾರ್ಡಿನಲ್ಲಿ ಸೋಮವಾರ ಹುಚ್ಚು ನಾಯಿಯೊಂದು 5ಮಂದಿಬಾಲಕರು ಸೇರಿದಂತೆ 6 ಮಂದಿಯನ್ನು ಕಚ್ಚಿ ಗಾಯಗೊಳಿಸಿದೆ.
ಪಟ್ಟಣದ12ನೇ ವಾರ್ಡ್ ವ್ಯಾಪ್ತಿಯಯಲ್ಲಿನ ನವೋದಯ ಕೊಚಿಂಗ್ ಮುಗಿಸಿ ಮನೆಗೆ ತೆರಳುವ ವಿಧ್ಯಾರ್ಥಿಗಳು ಸೇರಿದಂತೆ ಹಲವುಜನರ ಮೇಲೆ ಹುಚ್ಚು ನಾಯಿಯು ಏಕಾಏಕಿ ದಾಳಿ ನಡೆಸಿದೆ. ದಾರಿ ಮಧ್ಯೆ ಸಿಕ್ಕ ಸಿಕ್ಕವರ ಮೇಲೆ ಎರಗಿದ ನಾಯಿಯು ಬೆನ್ನು, ತೊಡೆ, ಕೈ, ಕಾಲು, ಮುಖದ ಭಾಗಕ್ಕೆ ಕಚ್ಚಿದೆ. ನಂತರ ಬೀದಿ ನಾಯಿಗಳಿಗೆ ಕಚ್ಚಿದೆ.
ಬಳಿಕ ಸ್ಥಳೀಯರು ಒಟ್ಟಾಗಿ ಹುಚ್ಚು ನಾಯಿಯನ್ನು ಹೊಡೆದು ಸಾಯಿಸಿದ್ದಾರೆ. ನಾಯಿ ಕಡಿತದಿಂದ ಗಾಯಗೊಂಡಿರುವವರನ್ನು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹೊಸಪೇಟೆ ನೂರು ಹಾಸಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇತ್ತೀಚಿಗೆ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಿರುವುದರಿಂದ ಜನರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮನೆಯಿಂದ ಹೊರ ಬಂದು ಓಡಾಡಲು ಭಯಪಡುವಂತಾಗಿದೆ. ನಾಯಿಗಳನ್ನು ಹಿಡಿಯಬೇಕೆಂದು ಸ್ಥಳೀಯರು ಪ.ಪಂ.ನ ಅಧಿಕಾರಿಗಳು ಮನವಿ ಮಾಡಿದ್ದಾರೆ.