ವಿಜಯನಗರವಾಣಿ
ಬೆಂಗಳೂರು: ಸರ್ಕಾರಿ ನೌಕರಮುಷ್ಕರ ಹಿನ್ನೆಲೆ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಲು ೭ನೇ ರಾಜ್ಯ ವೇತನ ಆಯೋಗವನ್ನು ರಚಿಸಿ ಆದೇಶಗಳನ್ನು ಹೊರಡಿಸಲಾಗಿರುತ್ತದೆ.
ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಹಿನ್ನೆಲೆಯಲ್ಲಿ, ಸರ್ಕಾರದ ನೀತಿ ನಿರ್ಣಯದಂತೆ ೭ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ, ರಾಜ್ಯ ಸರ್ಕಾರಿ ನೌಕರರಿಗೆ, ಸ್ಥಳೀಯ ಸಂಸ್ಥೆಗಳ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಹಾಗೂ ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ನಿರ್ಧರಿಸಿರುತ್ತದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
೨೦೧೮ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ ೦೧ನೇ ಏಪ್ರಿಲ್ ೨೦೨೩ ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡ ೧೭ ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ಸರ್ಕಾರಿ ನೌಕರರಿಗೆ ಸಿಎಂ ಸಿಹಿ ಸುದ್ದಿ ನೀಡಿದ್ದಾರೆ.