ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನಿಧನ

Share and Enjoy !

Shares
Listen to this article

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​.ಧ್ರುವನಾರಾಯಣ(61) ತೀವ್ರ ರಕ್ತ ಸ್ರಾವದಿಂದ ನಿಧನರಾಗಿದ್ದಾರೆ. ಆರ್.ಧ್ರುವನಾರಾಯಣ ಅವರಿಗೆ ಶನಿವಾರ (ಮಾ.11) ಬೆಳಗ್ಗೆ 6.30ರ ವೇಳೆಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರು ಡ್ರೈವರ್​ಗೆ ಕರೆ ಮಾಡಿದ್ದಾರೆ. ನಂತರ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ. ಆರ್​.ಧ್ರುವನಾರಾಯಣ ತೀವ್ರ ರಕ್ತಸ್ರಾವ ಆಗಿ ಮೃತಪಟ್ಟಿದ್ದಾರೆ ಎಂದು ಧ್ರುವನಾರಾಯಣಗೆ ಚಿಕಿತ್ಸೆ ನೀಡಿದ ವೈದ್ಯ ಮಂಜುನಾಥ್ ಹೇಳಿದ್ದಾರೆ. ನಾವು ನೋಡಿದಾಗ ಧ್ರುವನಾರಾಯಣ ಕೋಮಾ ಸ್ಥಿತಿಯಲ್ಲಿದ್ದರು ಎಂದು ತಿಳಿಸಿದ್ದಾರೆ. ಧ್ರುನಾರಾಯಣ ಇಬ್ಬರು ಪುತ್ರರು, ಪತ್ನಿ

1983ರಲ್ಲಿ ಕಾಂಗ್ರೆಸ್ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದ ಇವರು 1986ರಲ್ಲಿ ಎನ್​ಎಸ್​ಯುಐ ಬೆಂಗಳೂರು​ ಘಟಕದ ಅಧ್ಯಕ್ಷರಾಗಿದ್ದರು. ಚಾರಾಜನಗರ ಲೋಕಸಭಾ ಕ್ಷೇತ್ರದಿಂದ 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಹಾಗೇ ಕೊಳ್ಳೇಗಾಲ ಕ್ಷೇತ್ರದಿಂದ 1 ಬಾರಿ, ಸಂತೇಮರಹಳ್ಳಿ ಕ್ಷೇತ್ರದಿಂದ 1 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಬಾರಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು.

Share and Enjoy !

Shares