ಇಂದು ಪ್ರಧಾನಿ ನರೇಂದ್ರ ಮೋದಿಯವರು ಅನೇಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ

Share and Enjoy !

Shares

ಬೆಂಗಳೂರು:ಮಧುಸೂದನ್ ಸಾಯಿ ವೈದ್ಯಕೀಯ ಸಂಸ್ಥೆ ಉದ್ಘಾಟಿಸಿದ ಮೋದಿ ನಂತರ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಆಶ್ರಮದ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ & ಸಂಶೋಧನಾ ಸಂಸ್ಥೆಯನ್ನು ಪ್ರಧಾನಿ ಮೋದಿ ಉದ್ಘಾಟಣೆ ಮಾಡಿದರು ನಂತರ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಬಳಿಯ ಸತ್ಯಸಾಯಿ ಗ್ರಾಮಕ್ಕೆ ಪ್ರಧಾನಿ ಮೋದಿ ಆಗಮನ. ಮೆಡಿಕಲ್ ಕಾಲೇಜು ಉದ್ಘಾಟನಾ ಕಾರ್ಯಕ್ರಮದಲ್ಲಿ ಮೋದಿ ಭಾಗಿ.ತದ ನಂತರ ವಿಶ್ವೇಶ್ವರಯ್ಯ ಸಮಾಧಿ ಸ್ಥಳದತ್ತ ಪ್ರಧಾನಿ ಮೋದಿ ನಡೆ ವಿಶ್ವೇಶ್ವರಯ್ಯ ಸಮಾಧಿ ಸ್ಥಳದತ್ತ ಆಗಮಿಸುತ್ತಿರುವ ಪ್ರಧಾನಿ ಮೋದಿ. ಮುದ್ದೇನಹಳ್ಳಿ ಸರ್ಕಲ್ ಬಳಿ ಜಮಾಯಿಸಿರುವ ಸಾರ್ವಜನಿಕರು. ಪ್ರಧಾನಿ ಮೋದಿ ಕಣ್ತುಂಬಿಕೊಳ್ಳಲು ಕಾಯುತ್ತಿರುವ ಸಾರ್ವಜನಿಕರು. ಸಾರ್ವಜನಿಕರತ್ತ ಕೈಬೀಸಿ ಸಮಾಧಿ ಸ್ಥಳ ತಲುಪಿದ ಪ್ರಧಾನಿ ಮೋದಿ. ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಚಿಕ್ಕಬಳ್ಳಾಪುರ ತಲುಪಿದರು. ಎಚ್​​​ಎಎಲ್ ಏರ್​ಪೋರ್ಟ್​ನಿಂದ ವಾಯುಪಡೆ ಹೆಲಿಕಾಪ್ಟರ್ ಮೂಲಕ ಅವರು ಆಗಮಿಸಿದರು.

 ದಾವಣಗೆರೆಯಲ್ಲಿ ಮೋದಿಗೆ ಬೆಳ್ಳಿ ಇಟ್ಟಿಗೆ ಉಡುಗೊರೆ ಪ್ರಧಾನಿ ನರೇಂದ್ರ ಮೋದಿಗೆ ಬೆಳ್ಳಿ ಇಟ್ಟಿಗೆ ಕಾಣಿಕೆ ಕೊಡಲು ಬಿಜೆಪಿ ಮುಖಂಡ ಯಶವಂತರಾವ್ ಜಾಧವ್ ತಯಾರಿ ನಡೆಸಿದ್ದಾರೆ. ಅಯೋದ್ಯೆ ರಾಮಮಂದಿರ ಮತ್ತು ರಾಮನ ಕೆತ್ತನೆ ಇರೋ ಇಟ್ಟಿಗೆ ಉಡುಗೊರೆ ನೀಡಲಾಗುತ್ತದೆ.ನಂತರ ಎಚ್​ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ ಸೇನಾಹೆಲಿಕಾಪ್ಟರನಲ್ಲಿ ಮುದ್ದೇನಹಳ್ಳಿಯತ್ತ ಹೊರಟಿದ್ದಾರೆ.ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಮೋದಿ ಸ್ವಾಗತಿಸಲು ಸಿಎಂ ಬಸವರಾಜ ಬೊಮ್ಮಾಯಿ ಹೆಚ್​ಎಎಲ್ ಏರ್‌ಪೋರ್ಟ್ ಗೆ ಆಗಮಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯಿಂದ‌ ವೈಟ್ ಫೀಲ್ಡ್ ಮೆಟ್ರೋ ಸ್ಟೇಷನ್ ಲೋಕಾರ್ಪಣೆ ಹಿನ್ನೆಲೆ ಮೆಟ್ರೋ ಸ್ಟೇಷನ್ ಬಳಿ ರಸ್ತೆಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡಿವೆ. ಕೇಸರಿ ಬಾವುಟಗಳು ರಾರಾಜಿಸುತ್ತಿವೆ. ಸತ್ಯಸಾಯಿ ಆಶ್ರಮದ ಎಲಿಪ್ಯಾಡ್ ನಿಂದ ನೇರ ಮೆಟ್ರೋ ಸ್ಟೇಷನ್ ಬಳಿ ಆಗಮಿಸುವ ಮೋದಿ ಪ್ರಯಾಣ ಮಾಡುವ ರಸ್ತೆಯುದ್ದಕ್ಕೂ‌ ಬೃಹತ್ ಕಟೌಟ್ ಹಾಗೂ ಬಾವುಟಗಳು ಅಬ್ಬರಿಸುತ್ತಿವೆ. ಮೋದಿ ಆಗಮನ ಹಿನ್ನೆಲೆ ಮೆಟ್ರೋ ಸ್ಟೇಷನ್ ಸುತ್ತಾಮುತ್ತಾ‌ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ನಂತರ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು ಬೆಳಗ್ಗೆ 10.10ಕ್ಕೆ ಹೆಚ್​ಎಎಲ್​ ಏರ್​ಪೋರ್ಟ್​ಗೆ ಬಂದಿಳಿಯಲಿದ್ದಾರೆ. ಹೀಗಾಗಿ HAL ಸುತ್ತ ಬ್ಯಾರಿಕೇಡ್‌ ಹಾಕಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿ ಗ್ರಾಮದ ಸತ್ಯಸಾಯಿ ಆಶ್ರಮಕ್ಕೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನಲೆ ಮುದ್ದೇನಹಳ್ಳಿ ಗ್ರಾಮದಲ್ಲಿ ಪೊಲೀಸರು ಹೆಜ್ಜೆ ಹೆಜ್ಜೆಗೂ ಹೈ ಅಲರ್ಟ್ ಮಾಡಿದ್ದಾರೆ. ರಸ್ತೆಯುದ್ದಕ್ಕೂ ಬ್ಯಾರಿಕೇಡ್ ಹಾಕಿ ಭಾರಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ವೈಟ್‌ ಫೀಲ್ಡ್‌-ಕೆ.ಆರ್‌.ಪುರ ಮೆಟ್ರೋ  ಸಂಚಾರಕ್ಕೆ ಇಂದು ಹಸಿರು ನಿಶಾನೆ ಸಿಗಲಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿಯೇ ಬೆಂಗಳೂರಿಗೆ ಆಗಮಿಸಲಿದ್ದು, ಯೋಜನೆ ಲೋಕಾರ್ಪಣೆ ಗೊಳಿಸಲಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ  ಕೌಂಟ್‌ಡೌನ್ ಶುರುವಾಗಿದೆ. ರಾಜ್ಯಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ರಾಜಧಾನಿ ಬೆಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ ಸೇರಿ ಮಧ್ಯ ಕರ್ನಾಟಕದಲ್ಲಿ ಮತಬೇಟೆ ನಡೆಸಲಿದ್ದಾರೆ. ಕರುನಾಡಿನಲ್ಲಿ ಬಿಜೆಪಿ ಭದ್ರಕ್ಕೆ ಸೂತ್ರ ಹೆಣೆಯಲಾಗಿದೆ. ಸದ್ಯ ರಾಜ್ಯದಲ್ಲಿ ಮೋದಿ ರಂಗು ಮೇಳೈಸಿದೆ. ಎಲ್ಲೆಡೆ ಕೇಸರಿ ಬಾವುಟಗಳು ಹಾರಾಡುತ್ತಿವೆ. ಬೆಳಗ್ಗೆ 10.10ಕ್ಕೆ ಹೆಚ್​ಎಎಲ್​ ಏರ್​ಪೋರ್ಟ್​ಗೆ ಮೋದಿ ಆಗಮಿಸಲಿದ್ದು ಅಲ್ಲಿಂದ ಹೆಲಿಕಾಪ್ಟರ್​ನಲ್ಲಿ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಾರೆ. ಬೆಳಗ್ಗೆ 10.35ಕ್ಕೆ ಚಿಕ್ಕಬಳ್ಳಾಪುರ ತಲುಪಿ ಬೆಳಗ್ಗೆ 10.45ಕ್ಕೆ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ & ಸಂಶೋಧನಾ ಸಂಸ್ಥೆ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 12.55ಕ್ಕೆ ವೈಟ್​ಫೀಲ್ಡ್​ ಮೆಟ್ರೋ ಸ್ಟೇಷನ್​ಗೆ ಆಗಮಿಸಿ ಮಧ್ಯಾಹ್ನ 1 ಗಂಟೆಗೆ ವೈಟ್​ಫೀಲ್ಡ್​ ಮೆಟ್ರೋ ಮಾರ್ಗ ಉದ್ಘಾಟಿಸಲಿದ್ದಾರೆ. ಉದ್ಘಾಟನೆ ನಂತರ ಮೆಟ್ರೋದಲ್ಲಿ ಪ್ರಯಾಣ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 1.50ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್​ನಲ್ಲಿ ದಾವಣಗೆರೆಗೆ ತೆರಳಿ ಮಧ್ಯಾಹ್ನ 3.30ಕ್ಕೆ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಿ ದಾವಣಗೆರೆಯಲ್ಲಿ ಇವತ್ತು ಬಿಜೆಪಿ ಮಹಾಸಂಗಮ ಬೃಹತ್ ಸಮಾವೇಶ ನಡೆಯಲಿದೆ. ಇದಕ್ಕಾಗಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗುತ್ತಿದ್ದಾರೆ. ಈ ಹಿನ್ನೆಲೆ ದಾವಣಗೆರೆ ನಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್​ ವ್ಯವಸ್ಥೆ ಮಾಡಲಾಗಿದೆ. ನೋಡಿದಲ್ಲೆಲ್ಲಾ ಪೊಲೀಸ್‌ ಅಧಿಕಾರಿಗಳೇ ಕಾಣುತ್ತಿದ್ದಾರೆ. ಮತ್ತೊಂದೆಡೆ ಮೋದಿ ಕಾರ್ಯಕ್ರಮಕ್ಕೆ ಬರುವ ಜನರಿಗಾಗಿ ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿದೆ. ನಂತರ ಸಂಜೆ 5.15ಕ್ಕೆ ದಾವಣಗೆರೆಯಿಂದ ಹೆಲಿಕಾಪ್ಟರ್​ನಲ್ಲಿ ಶಿವಮೊಗ್ಗಕ್ಕೆ ಪ್ರಯಾಣಿಸಲಿದ್ದಾರೆ. ಬಳಿಕ ಸಂಜೆ 5.55ಕ್ಕೆ ಶಿವಮೊಗ್ಗ ಏರ್​ಪೋರ್ಟ್​ನಿಂದ ದೆಹಲಿಗೆ ತೆರಳಲಿದ್ದಾರೆ.

Share and Enjoy !

Shares