ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿ

Share and Enjoy !

Shares
Listen to this article

ಬಳ್ಳಾರಿ: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ 5 ಕ್ಷೇತ್ರಗಳಲ್ಲಿ 24 ಚೆಕ್ ಪೋಸ್ಟ್ ಕಣ್ಗಾವಲು, .11ರವರೆಗೆ ಮತದಾರರ ನೋಂದಣಿಗೆ ಅವಕಾಶ: ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಿಪಾಟಿ

ಚುನಾವಣಾ ಆಯೋಗವು 2023 ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ವೇಳಾ ಪಟ್ಟಿ ಪ್ರಕಟಿಸಿದ್ದು, ಏಪ್ರಿಲ್ 13ರಿಂದ ಅಧಿಸೂಚನೆ ಪ್ರಕಟಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪವನ್ ಕುಮಾರ್ ಮಾಲಿಪಾಟಿ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಾಮಪತ್ರ ಸಲ್ಲಿಸಲು .13 ರಿಂದ ಆರಂಭವಾಗಿ .20 ಕೊನೆಯ ದಿನವಾಗಿರುತ್ತದೆ. .21 ರಂದು ನಾಮಪತ್ರಗಳ ಪರಿಶೀಲನೆ ಮತ್ತು .24 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿರುತ್ತದೆ. ಮೇ.10 ರಂದು ಮತದಾನ, ಮೇ.13 ಎಣಿಕೆ ನಡೆಯಲಿದ್ದು, ನೀತಿ ಸಂಹಿತೆಯು ಮೆ.15ರವೆಗೆ ಜಾರಿಯಲ್ಲಿರುತ್ತದೆ.

ಚುನಾವಣಾಧಿಕಾರಿಗಳ ನೇಮಕ

ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಿದೆ. ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್, ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರಕ್ಕೆ ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಸಂಡೂರುಗೆ ಜಿಪಂನ ಉಪಕಾರ್ಯದರ್ಶಿ ಶರಣಬಸವರಾಜ, ಸಿರುಗುಪ್ಪಗೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸತೀಶ್ ಹಾಗೂ ಕಂಪ್ಲಿಗೆ ವಿಮ್ಸ್‍ನ ಮುಖ್ಯಾಧಿಕಾರಿ ಡಾ.ನಯನ ಅವರನ್ನು ನೇಮಕ ಮಾಡಲಾಗಿದೆ.

ಕ್ಷೇತ್ರ ಮತ್ತು ಮತದಾರರು:

ಜಿಲ್ಲೆಯಲ್ಲಿ ಒಟ್ಟು 5 ವಿಧಾನಸಭಾ ಮತಕ್ಷೇತ್ರಗಳಿದ್ದು, ಅದರಲ್ಲಿ 4 (91-ಕಂಪ್ಲಿ, 92-ಸಿರುಗುಪ್ಪ, 93-ಬಳ್ಳಾರಿ ಗ್ರಾಮೀಣ ಹಾಗೂ 95-ಸಂಡೂರು) ಪರಿಶಿಷ್ಟ ಪಂಗಡ ಮೀಸಲು ಮತಕ್ಷೇತ್ರಗಳಿದ್ದು, 94-ಬಳ್ಳಾರಿ ನಗರ ಕ್ಷೇತ್ರವು ಇತರೆ ಮೀಸಲು ಕ್ಷೇತ್ರವಾಗಿದೆ. ಜಿಲ್ಲೆಯಲ್ಲಿ 5,61,718 ಪುರುಷ ಮತದಾರರು, 5,79,012 ಮಹಿಳಾ ಮತದಾರರು, 169 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಸೇರಿದಂತೆ ಒಟ್ಟು 11,40,899 ಮತದಾರರು ಇದ್ದಾರೆ. ಜಿಲ್ಲೆಯ ಒಟ್ಟು ಚುನಾವಣಾ ಜನಸಂಖ್ಯೆ ಸರಾಸರಿಗೆ ಶೇ.63.46ರಷ್ಟು ಮತದಾರರು ಇದ್ದಾರೆ. ಇದು ಹಿಂದಿನ ಚುನಾವಣೆಗೆ ಹೋಲಿಸಿದರೆ ಹೆಚ್ಚಳವಾಗಿದೆ ಎಂದು ತಿಳಿಸಿದರು.

ಈಗಾಗಲೇ ಮತದಾರರ ನೋಂದಣಿ ಪ್ರಕ್ರಿಯೆಯು ಜಾರಿಯಲ್ಲಿದ್ದು, ಹೊಸದಾಗಿ ನೊಂದಾಯಿಸಬೇಕಾದ ಮತದಾರರಿಗೆ ಎಪ್ರೀಲ್ 11 ರವರೆಗೆ ನೋಂದಣಿಗಾಗಿ ಅರ್ಜಿಯನ್ನು ಸ್ವೀಕರಿಸುವ ಪ್ರಕ್ರಿಯೆ ನಿರಂತರವಾಗಿ ಜಾರಿಯಲ್ಲಿರುತ್ತದೆ. ಅರ್ಹರಿರುವರು ನಿಗದಿಪಡಿಸಿದ ಕಾಲ ಮಿತಿಯೊಳಗೆ ಅಂತರ್ಜಾಲದಲ್ಲಿ ತಮ್ಮ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ ಮತದಾನ ಹಕ್ಕನ್ನು ಚಲಾಯಿಸಿ ಸುಭದ್ರವಾದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಸಾರ್ವಜನಿಕರು ಪಾತ್ರವಹಿಸಬೇಕು ಎಂದು ಹೇಳಿದರು.

 

ಯುವ ಮತದಾರರಲ್ಲಿ ಪ್ರಥಮ ಜಿಲ್ಲೆ:

ಜಿಲ್ಲೆಯಲ್ಲಿ ಬಾರಿ 34,265 ಯುವ ಮತದಾರರು ನೊಂದಾಯಿಸಿಕೊಂಡಿದ್ದಾರೆ. ರಾಜ್ಯದಲ್ಲಿಯೇ ಬಳ್ಳಾರಿ ಜಿಲ್ಲೆಯು ಅತಿಹೆಚ್ಚು ಯುವ ಮತದಾರರನ್ನು ನೋಂದಾಯಿಸಿದ ಪ್ರಥಮ ಜಿಲ್ಲೆಯಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 1191 ಚುನಾವಣಾ ಮತಗಟ್ಟೆಗಳಿವೆ. ಚುನಾವಣಾ ಆಯೋಗವು ಸಹ ಹೊಸ ಮತಯಂತ್ರಗಳ ಬಳಕೆಗೆ ಸಜ್ಜಾಗಿದೆ. ಹೈದರಾಬಾದ್ ಮೂಲದ ಇಸಿಐಎಲ್ (ಎಲೆಕ್ಟ್ರಾನಿಕ್ ಕಾಪೋರೇಷನ್ ಇಂಡಿಯಾ ಲಿಮಿಟೆಡ್) ಹೊಸ ಮತ ಯಂತ್ರಗಳನ್ನು ತಯಾರಿಸಿದೆ. ಜಿಲ್ಲೆಯ ಮತಗಟ್ಟೆಗಳಿಗೆ ಅವಶ್ಯವಿರುವ 2445 (ಬ್ಯಾಲೆಟ್ ಯುನಿಟ್), 1716 (ಕಂಟ್ರೋಲ್ ಯುನಿಟ್) ಮತ್ತು 1857 (ವಿ.ವಿ.ಪ್ಯಾಟ್)ಗಳು ಸರಬರಾಜು ಆಗಿದ್ದು, .ವಿ.ಎಂ.ಗಳನ್ನು ಚುನಾವಣಾ ಆಯೋಗದಿಂದ ನೇಮಿಸಲ್ಪಟ್ಟ ತಂತ್ರಜ್ಞರಿಂದ ರಾಜಕೀಯ ಪಕ್ಷಗಳ ಉಪಸ್ಥಿತಿಯಲ್ಲಿ ಪ್ರಥಮ ಹಂತದ ಪರಿಶೀಲನಾ ಕಾರ್ಯವನ್ನು ಮಾಡಲಾಗಿದೆ. ನೂತನ ಮತ ಯಂತ್ರಗಳಲ್ಲಿ ಮತದಾರರು ಮತ ಚಲಾಯಿಸಿದಾಗ ಅಭ್ಯರ್ಥಿಯ ಛಾಯಾಚಿತ್ರ ಗೋಚರಿಸಲಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ 16,827 ಜನ 80 ವರ್ಷ ಮೇಲ್ಪಟ್ಟ ವಯಸ್ಕ ಮತದಾರರು ಮತ್ತು 14, 871 ಜನ ವಿಶೇಷ ಚೇತನ ಮತದಾರರಿದ್ದಾರೆ. ಚುನಾವಣಾ ಆಯೋಗವು 80 ವರ್ಷ ಮೇಲ್ಪಟ್ಟ ವಯಸ್ಕರು ಮತ್ತು ವಿಶೇಷ ಚೇತನರು ಮತದಾನದಿಂದ ಹೊರಗುಳಿಯಬಾರದೆಂದು ಮನೆಯಿಂದಲೇ ಮತದಾನ ಮಾಡಲು ಅಂಚೆ ಮತದಾನವನ್ನು ಇದೇ ಮೊದಲ ಬಾರಿ ಪರಿಚಯಿಸಿದೆ. ಮೂಲಕ ಶೇ.40ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿದ ವಿಶೇಷ ಚೇತನರು ಮತ್ತು 80 ವರ್ಷ ಮೇಲ್ಪಟ್ಟ ವಯಸ್ಕರು ಅಗತ್ಯ ದಾಖಲೆ ನೀಡಿ ಧೃಢೀಕರಣದೊಂದಿಗೆ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು 5 ಮತಕ್ಷೇತ್ರಗಳಿಗೆ ಜಿಲ್ಲೆಯಾದ್ಯಂತ ಒಟ್ಟು 24 ಚೆಕ್‍ಪೆÇೀಸ್ಟ್ ಸ್ಥಾಪಿಸಲಾಗಿರುತ್ತದೆ. ಪ್ರತಿ ಚೆಕ್‍ಪೋಸ್ಟ್‍ ನಲ್ಲಿ 3 ಎಸ್‍ಎಸ್‍ಟಿ ಅಧಿಕಾರಿಗಳು ಹಾಗೂ ಪೋಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಮತಕ್ಷೇತ್ರಕ್ಕೆ ಫ್ಲೈಯಿಂಗ್ ಸ್ಕ್ವ್ಯಾಡ್ ಮತ್ತು ವಿಡಿಯೋ ಕಣ್ಗಾವಲು ತಂಡಗಳನ್ನೂ ಕೂಡ ನೇಮಕ ಮಾಡಲಾಗಿದೆ.

ಸಿ.ವಿಸಲ್ ಆಪ್ ಬಳಸಿ:

ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ ಹಾಗೂ ನಿಷ್ಪಕ್ಷಪಾತವಾಗಿ ಜರುಗುವಲ್ಲಿ ಪ್ರತಿಯೊಬ್ಬ ನಾಗರಿಕರು ಸಿ.ವಿಸಲ್ ಆಪ್ ಬಳಸಿ ನೀತಿ ಸಂಹಿತೆ ಉಲ್ಲಂಘಿಸುವ ಪ್ರಕರಣಗಳನ್ನು ಇದರಲ್ಲಿ ದಾಖಲಿಸಬಹುದಾಗಿದೆ. ಪ್ರತಿಯೊಬ್ಬರೂ ಯಾವುದೇ ಆತಂಕವಿಲ್ಲದೇ ಆಪ್ ಬಳಕೆ ಮಾಡಿಕೊಂಡು ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಸಹಕರಿಸಬೇಕು ಎಂದ ಅವರು ಎಲ್ಲಾ ರಾಜಕೀಯ ಪಕ್ಷದವರು ಹಾಗೂ ಅಧಿಕಾರಿ ವರ್ಗದವರು ಸಕಾರಾತ್ಮಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕಾನೂರು, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರಾ ಹಾಜರಿದ್ದರು.

 

Share and Enjoy !

Shares