ಕರ್ನಾಟಕ ವಿಧಾನಭೆ ಚುನಾವಣೆ ಹಿನ್ನೆಲೆ ಮೇ 9 ಮತ್ತು 10 ರಂದು ಕರ್ನಾಟಕ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

Share and Enjoy !

Shares
Listen to this article

ಬೆಂಗಳೂರು: ಕರ್ನಾಟಕ ವಿಧಾನಭೆ ಚುನಾವಣೆ  ಹಿನ್ನೆಲೆ ಮೇ 9 ಮತ್ತು 10 ರಂದು ಕರ್ನಾಟಕ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಮೇ 10ರಂದು ರಾಜ್ಯದ 224 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುವ ಹಿನ್ನೆಲೆ ಮೇ 9, 10ರಂದು ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಕೆಎಸ್​ಆರ್​ಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

10ರಂದು ನಡೆಯುವ ವಿಧಾನಸಭಾ ಚುನಾವಣೆ ಹಿನ್ನೆಲೆ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಚುನಾವಣಾ ಕರ್ತವ್ಯಕ್ಕೆ ಕೆಎಸ್ಆರ್​ಟಿಸಿ ಬಸ್​ಗಳನ್ನು ನಿಯೋಜಿಸಲಾಗಿದೆ. ಪರಿಣಾಮ 9 ಮತ್ತು 10 ರಂದು ರಾಜ್ಯದಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತದೆ. ಪ್ರಯಾಣಿಕರು ಸಹಕರಿಸಬೇಕೆಂದು ಪ್ರಕಟಣೆ ಮೂಲಕ ಕೆಎಸ್​ಆರ್​ಟಿಸಿ ಮನವಿ ಮಾಡಿದೆ.

ಚುನಾವಣೆ ಡ್ಯೂಟಿಗೆ ಹೋಗಲಿರುವ ಬಸ್ಗಳ ಸಂಖ್ಯೆ

ರಾಜ್ಯದಲ್ಲಿ ಒಟ್ಟು 8100 ಕೆಎಸ್​ಆರ್​ಟಿಸಿ ಬಸ್​ಗಳಿದ್ದು, ಈ ಪೈಕಿ 3700 ಬಸ್​​ಗಳು ಚುನಾವಣಾ ಡ್ಯೂಟಿಗೆ ಬುಕ್ ಆಗಿವೆ. ಮೇ 9 ಮತ್ತು 10 ರಂದು 4400 ಕೆಎಸ್​ಆರ್​ಟಿಸಿ ಬಸ್​ಗಳು ಮಾತ್ರ ಸಂಚಾರ ಮಾಡುತ್ತವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆ ಎರಡು ದಿನಗಳ ಕಾಲ ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

 

Share and Enjoy !

Shares