ವಿಜಯನಗರವಾಣಿ ಸುದ್ದಿ
ಕುರುಗೋಡು:ಬಹು ನೀರೀಕ್ಷೇಯಂತೆ 2022-23 ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು.
ಪಟ್ಟಣದ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಈ ಬಾರಿ 100% ಫಲಿತಾಂಶ ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ.
ಒಟ್ಟು 61 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 61 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
16 ವಿದ್ಯಾರ್ಥಿಗಳು ಡಿಸ್ಟಿಕ್ಷನ್ ನಲ್ಲಿ ಉತ್ತೀರ್ಣರಾಗಿದ್ದು.44 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಒಬ್ಬ ವಿದ್ಯಾರ್ಥಿ ದ್ವಿತೀಯ ಸ್ಥಾನ ಪಡೆದಿದ್ದಾನೆ.
592 ಅಂಕ ಪಡೆದ ಹೆಚ್ ಸಾನಿಯಾ 94.72% ಅಂಕ ಪಡೆದು ಶಾಲೆಗೆ ಹೆಚ್ಚು ಅಂಕ ಪಡೆದಿದ್ದಾಳೆ.
580 ಅಂಕ ಪಡೆದ ಎಂ.ಮೇಘನ 92.8% ಅಂಕ ಪಡೆದಿದ್ದಾಳೆ.
574 ಅಂಕ ಪಡೆದ ಸುಭಾಷ್ ಚಂದ್ರ 91.84 % ಅಂಕ ಪಡೆದರೆ.
570 ಅಂಕ ಪಡೆದ ಮಧುವೀಣಾ ನಾಲ್ಕನೇ ಸ್ಥಾನ ಪಡೆದಿದ್ದಾಳೆ.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ವೆರೋನಿಕಂ ಮಾತನಾಡಿ ವಿದ್ಯಾರ್ಥಿಗಳ ಸಾಧನೆ ಖುಷಿ ನೀಡಿದೆ.
ನಿರಂತರ ಅಭ್ಯಾಸ ಹಾಗೂ ಏಕಾಗ್ರತೆಯಿಂದ ಏನನ್ನಾದರೂ ಸಾಧಿಸಬಹುದು. ಈ ಸಾಧನೆಗೆ ನಮ್ಮೊಂದಿಗೆ ಕೈಜೋಡಿಸಿದ ಶಾಲೆಯ ಎಲ್ಲಾ ಪೋಷಕರು ಹಾಗೂ ಶಿಕ್ಷಕರಿಗೆ ಧನ್ಯವಾದಗಳು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಸಿಸ್ಟರ್ ರವರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.