ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಪಟ್ಟ, ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ – ಎಐಸಿಸಿ ಅಧ್ಯಕ್ಷ ಖರ್ಗೆ ಸರ್ವಾನುಮತದ ನಿರ್ಣಯ

Share and Enjoy !

Shares
Listen to this article

ನವದೆಹಲಿ: ಸಿದ್ದರಾಮಯ್ಯಗೆ 2ನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ನೀಡುವುದಾಗಿ ತಿಳಿದುಬಂದಿದೆ. ಬುಧವಾರ  ನಡೆದ ಅಂತಿಮ ಬೆಳವಣಿಗೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು  ಈ ಸರ್ವಾನುಮತದ ನಿರ್ಣಯವನ್ನು  ದೆಹಲಿಯಲ್ಲಿ ಪ್ರಕಟಿಸಿದ್ದಾರೆ. ಮೇ 20 ಶನಿವಾರ ಮಧ್ಯಾಹ್ನ 12.30ಕ್ಕೆ ಪದಗ್ರಹಣ ನಡೆಯಲಿದೆ

ಕಳೆದ 5 ದಿನಗಳಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಕೊನೆಗೂ ತೆರೆ ಬಿದ್ದಿದ್ದು, ಗುರುವಾರ ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​ ಅವರು ಶಾಸಕಾಂಗ ಸಭೆ ಕರೆದಿದ್ದಾರೆ. ವಿಧಾನಸಭೆ, ಪರಿಷತ್, ಕಾಂಗ್ರೆಸ್ ಸಂಸದರನ್ನು ಬೆಂಗಳೂರು ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆಯುವ ಸಭೆಗೆ ಡಿಕೆಶಿ ಆಹ್ವಾನಿಸಿದ್ದಾರೆ.

Share and Enjoy !

Shares