ಇಂದೇ ಐದು ಗ್ಯಾರಂಟಿಗಳನ್ನು ಅನುಮೋದನೆ ಮಾಡಿದ್ದೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Share and Enjoy !

Shares

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಇಂದು(ಮೇ.20)ನಗರದ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಅವರು ‘ ಕರ್ನಾಟಕದ ಜನರ ಆಶೀರ್ವಾದಿಂದ ನಮ್ಮ ಸರ್ಕಾರ ಬಂದಿದೆ. ರಾಹುಲ್ ಗಾಂಧಿ, ಖರ್ಗೆ, ಪ್ರಿಯಾಂಕಾ ಸೇರಿ ಅನೇಕರು ಪ್ರಚಾರ ಮಾಡಿದರು, ಕಾಂಗ್ರೆಸ್​ ಪಕ್ಷದ ಪರ ಪ್ರಚಾರ ಮಾಡಿದ ಎಲ್ಲರಿಗೂ ಧನ್ಯವಾದಗಳು ಹೇಳುತ್ತೇನೆ. ಜೊತೆಗೆ ನಾವು ಕೊಟ್ಟ ಐದು ಗ್ಯಾರಂಟಿಗಳನ್ನು  ಇಂದೇ ಅನುಮೋದನೆ ನೀಡುತ್ತೇನೆ ಎನ್ನುವ ಮೂಲಕ ರಾಜ್ಯದ ಜನರಿಗೆ ಕೊಟ್ಟ ಭರವಸೆಯನ್ನ ಈಡೇರಿಸಿದ್ದಾರೆ.

ಇನ್ನು ಇದೇ ವೇಳೆ ವಿವಿಧ ರಾಜ್ಯಗಳ ನಾಯಕರು ನಮಗೆ ಶುಭ ಹಾರೈಸಲು ಬಂದಿದ್ದಾರೆ. ರಾಜ್ಯದ ಜನರ ನಿರೀಕ್ಷೆಗೆ ತಕ್ಕಂತೆ ನಾವು ಆಡಳಿತ ನಡೆಸುತ್ತೇವೆ. ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುವ ಮೂಲಕ ಕರ್ನಾಟಕದ ಜನರಿಗೆ ನಾವು ನೀಡಿದ ಭರವಸೆ ಈಡೇರಿಸುತ್ತೇವೆ. ನಾವು ನುಡಿದಂತೆ ನಡೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬಳಿಕ ಸಿಎಂ, ಡಿಸಿಎಂ ಇಬ್ಬರು ಒಂದೇ ಕಾರಿನಲ್ಲಿ ವಿಧಾನಸೌಧಕ್ಕೆ ತೆರೆಳಿದರು.

 

Share and Enjoy !

Shares