ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಗ್ಲಾಸ್ ಹೌಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ

Share and Enjoy !

Shares
Listen to this article

ಬಳ್ಳಾರಿ :ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿಲ್ಲಾಧ್ಯಕ್ಷರಾದ ಶ್ರೀ ಗೋನಾಳ್ ರಾಜಶೇಖರಗೌಡರವರು ಬಳ್ಳಾರಿ ನಗರದ ಹವಂಬಾವಿಯಲ್ಲಿ  ಜಿ.ಜನಾರ್ದನ ರೆಡ್ಡಿ ಅವರ ನಿವಾಸದ ಮುಂದಿನ ಗ್ಲಾಸ್ ಹೌಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು.

ಗೋನಾಳ್ ರಾಜಶೇಖರ ಗೌಡ ಮಾತನಾಡಿದ ಅವರು ಜಿ. ಜನಾರ್ಧನರೆಡ್ಡಿಯವರ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಬಳ್ಳಾರಿ ಜಿಲ್ಲೆಯಲ್ಲಿ ಬೂತ್ ಮಟ್ಟದಿಂದ ಸಂಘಟನೆ ಮಾಡಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸಿದ್ದರಾಗುತ್ತೇವೆ ಎಂದು ತಿಳಿಸಿದರು.

ಬಳ್ಳಾರಿ ನಗರ, ಸಂಡೂರು ಮತ್ತು ಸಿರುಗುಪ್ಪ ಕ್ಷೇತ್ರದ ಸಮಸ್ತ ಮತದಾರ ಬಂಧುಗಳಿಗೆ, ಹಗಲಿರುಳೆನ್ನದೆ ಪಕ್ಷಕ್ಕಾಗಿ ಶ್ರಮಿಸಿದ ಸಮಸ್ತ ಪದಾಧಿಕಾರಿಗಳಿಗೆ, ಮುಖಂಡರಿಗೆ ಮತ್ತು ಕಾರ್ಯಕರ್ತರಿಗೆ ತುಂಬು ಹೃದಯದ ಧನ್ಯವಾದಗಳು ತಿಳಿಸಿದರು.‌

Share and Enjoy !

Shares