ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ

Share and Enjoy !

Shares
Listen to this article

ಬೆಂಗಳೂರು:ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಹಿನ್ನಲೆ ಕಂಠೀರವ ಸ್ಟೇಡಿಯಂ ಸುತ್ತು ಎಲ್ಲೆಲ್ಲೂ ಸಿದ್ದರಾಮಯ್ಯ, ಡಿಕೆಶಿ ಫ್ಲೆಕ್ಸ್, ಬ್ಯಾನರ್ಗಳು ರಾರಾಜಿಸುತ್ತಿವೆ. ಇನ್ನು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಭಿಮಾನಿಗಳು, ಕಾರ್ಯಕರ್ತರು. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಆಗಮಿಸುತ್ತಿದ್ದಾರೆ.

ಮಾಜಿ ಸಿಎಂ, ಟಗರು ಸಿದ್ದರಾಮಯ್ಯ ಹಾಗೂ ಟ್ರಬಲ್ ಶೂಟರ್, ಕನಕಪುರ ಬಂಡೆ ಡಿಕೆ ಶಿವಕುಮಾರ್ಅವರ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ಕ್ಕೆ ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆ ಶಿವಕುಮಾರ್ ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಡಿಸಿಎಂ ಆಗಿ ಅಧಿಕಾರವನ್ನು ಸ್ವೀಕರಿಸುತ್ತಿದ್ದಾರೆ. ಹೀಗಾಗಿ ಅಭಿಮಾನಿಗಳ ವಲಯದಲ್ಲಿ ಉತ್ಸಾಹ ಉತ್ತುಂಗಕ್ಕೇರಿದೆ. ಇನ್ನು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೊತೆ 8 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Share and Enjoy !

Shares