ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ 8 ನೂತನ ಸಚಿವರಿಂದ ಪ್ರಮಾಣವಚನ

Share and Enjoy !

Shares

ಬೆಂಗಳೂರು:ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಪ್ರತಿಜ್ಞಾವಿಧಿ ಸ್ವೀಕಾರ

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆಯುತ್ತಿದ್ದು ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯಗೆ ಪ್ರತಿಜ್ಞಾವಿಧಿ ಬೋಧಿಸಿದ್ದು ದೇವರ ಹೆಸರಿನಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧದಲ್ಲಿರುವ ಸಿಎಂ ಕಚೇರಿಯ ನಾಮಫಲಕ ಬದಲಾವಣೆ

ವಿಧಾನಸೌಧದ ಸಿಎಂ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರ ಹೆಸರು ತೆಗೆದು ಸಿಎಂ ಸಿದ್ದರಾಮಯ್ಯ ಎಂದು ಹೆಸರು ಬದಲಾಯಿಸಿ ನೇಮ್ ಪ್ಲೇಟ್ ಚೇಂಜ್ ಮಾಡಲಾಗಿದೆ. ವಿಧಾನ ಸೌಧದ ಮೂರನೇ ಮಹಡಿಯಲ್ಲಿ ರೂಂ ನಂಬರ್ 323 ಸಿಎಂ ಕಚೇರಿ ಬಳಿ ನೇಮ್ ಪ್ಲೇಟ್ ಚೇಂಜ್ ಮಾಡಲಾಗಿದೆ.

ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್

ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ಗೆಹ್ಲೋಟ್​​ ಅವರು ಪ್ರತಿಜ್ಞಾವಿಧಿ ಬೋಧಿಸಿದ್ದು ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಡಿಸಿಎಂ ಆಗಿ ಡಿಕೆ ಶಿವಕುಮಾರ್ಪ್ರಮಾಣವಚನ ಸ್ವೀಕರಿಸಿದ್ದಾರೆ

ಸಚಿವರಾಗಿ ಜಮೀರ್​​ ಅಹ್ಮದ್ರಿಂದ ಪ್ರಮಾಣ ವಚನ ಸ್ವೀಕಾರ

ಸಚಿವರಾಗಿ ಜಮೀರ್​​ ಅಹ್ಮದ್​​​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಇಂಗ್ಲೀಷ್​ನಲ್ಲಿ ಜಮೀರ್​​ ಅಹ್ಮದ್​​ ಅವರು ಅಲ್ಲಾಹ್ ಮತ್ತು ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸಚಿವರಾಗಿ ರಾಮಲಿಂಗಾರೆಡ್ಡಿ ಪ್ರಮಾಣ ವಚನ ಸ್ವೀಕಾರ ಸಚಿವರಾಗಿ ರಾಮಲಿಂಗಾರೆಡ್ಡಿ​​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ರಾಮಲಿಂಗಾರೆಡ್ಡಿ​ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು

ಸಚಿವರಾಗಿ ಪ್ರಿಯಾಂಕ್ ಖರ್ಗೆ ಪ್ರಮಾಣ ವಚನ ಸ್ವೀಕಾರ ಸಚಿವರಾಗಿ ಪ್ರಿಯಾಂಕ್ ಖರ್ಗೆ​​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಪ್ರಿಯಾಂಕ್ ಖರ್ಗೆ​ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಅಪ್ಪ, ಎಐಸಿಸಿ ಅಧಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಪುತ್ರ ಪ್ರಿಯಾಂಕ್ ಖರ್ಗೆ ಪ್ರಮಾಣ ವಚನ ಸ್ವೀಕರಿಸಿದ್ದರು.

 ಸಚಿವರಾಗಿ ಸತೀಶ್ ಜಾರಕಿಹೊಳಿ ಪ್ರಮಾಣ ವಚನ ಸ್ವೀಕಾರ

ಸಚಿವರಾಗಿ ಸತೀಶ್ ಜಾರಕಿಹೊಳಿ​​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಸತೀಶ್ ಜಾರಕಿಹೊಳಿಅವರು ಬುದ್ಧ, ಬಸವ, ಅಂಬೇಡ್ಕರ್ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

 ಸಚಿವರಾಗಿ ಎಂ.ಬಿ.ಪಾಟೀಲ್ ಪ್ರಮಾಣ ವಚನ ಸ್ವೀಕಾರ  ಸಚಿವರಾಗಿ ಎಂ.ಬಿ.ಪಾಟೀಲ್​​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಎಂ.ಬಿ.ಪಾಟೀಲ್​ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸಚಿವರಾಗಿ ಕೆ.ಜೆ.ಜಾರ್ಜ್ ಪ್ರಮಾಣ ವಚನ ಸ್ವೀಕಾರ

ಸಚಿವರಾಗಿ ಕೆ.ಜೆ.ಜಾರ್ಜ್​​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಕೆ.ಜೆ.ಜಾರ್ಜ್ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

 ಸಚಿವರಾಗಿ ಕೆ.ಹೆಚ್.ಮುನಿಯಪ್ಪ ಪ್ರಮಾಣ ವಚನ ಸ್ವೀಕಾರ ಸಚಿವರಾಗಿ ಕೆ.ಹೆಚ್.ಮುನಿಯಪ್ಪ​​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಕೆ.ಹೆಚ್.ಮುನಿಯಪ್ಪಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಸಚಿವರಾಗಿ ಡಾ.ಜಿ.ಪರಮೇಶ್ವರ್​​ ಪ್ರಮಾಣ ವಚನ ಸ್ವೀಕಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆಯುತ್ತಿದ್ದು ಸಚಿವರಾಗಿ ಡಾ.ಜಿ.ಪರಮೇಶ್ವರ್​​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಡಾ.ಪರಮೇಶ್ವರ್ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

 

ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 8 ನೂತನ ಸಚಿವರಿಂದ ಪ್ರಮಾಣವಚನ ಸ್ವೀಕರಿಸಿದ್ದಾರೆ.

 

Share and Enjoy !

Shares