ನೂತನ ಸ್ಪೀಕರ್ ಆಗಿ ಯುಟಿ ಖಾದರ್ ಅಧಿಕಾರ ಸ್ವೀಕಾರ

Share and Enjoy !

Shares
Listen to this article

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಯುಟಿ ಖಾದರ್ ಫರೀದ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

ಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಸೂಚಿಸಿದರು. ಇದಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅನುಮೋದಿಸಿದರು.

ಸ್ಪೀಕರ್ ಸ್ಥಾನಕ್ಕೆ ಯು.ಟಿ ಖಾದರ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ, ಸರ್ವಾನುಮತದಿಂದ ಆಯ್ಕೆಯಾದರು.

ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಅವರ ಆದೇಶ ಅನುಸಾರ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪೀಕರ್ ಪೀಠ ಬಳಿಗೆ ಯುಟಿ ಖಾದರ್ ಅವರನ್ನು ಕರೆ ತಂದರು. ಬಳಿಕ ಶುಭಾಶಯ ಕೋರಲಾಯ್ತು.

ಬಳಿಕ ಸಿದ್ದರಾಮಯ್ಯ ಹಾಗೂ ಬಸವರಾಜ ಬೊಮ್ಮಾಯಿ ಅವರು ಅಭಿನಂದನಾ ಭಾಷಣ ಮಾಡಿ, ನೂತನ ಸ್ಪೀಕರ್ ಗೆ ಶುಭಾಶಯ ಕೋರಿದರು.

 

Share and Enjoy !

Shares