24ನೂತನ ಸಚಿವರ ಪ್ರಮಾಣವಚನ ಸ್ವೀಕಾರ

Share and Enjoy !

Shares

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿರುವ 24 ಮಂದಿ ಸಚಿವರ ಪಟ್ಟಿ ಅಂತಿಮಗೊಂಡಿದ್ದು, ಇಂದು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ದೆಹಲಿಯಲ್ಲಿ ಹೈಕಮಾಂಡ್​ ನಾಯಕರ ಜೊತೆ ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಭೆ ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರಲಿರುವ 24 ಮಂದಿ ಸಚಿವರ ಪಟ್ಟಿ ಅಂತಿಮಗೊಂಡಿದೆ. ಇಂದು (ಮೇ.27) ಬೆಳಗ್ಗೆ 11.45ಕ್ಕೆ ರಾಜಭವನದ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಖ್ಯಮ೦ತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒಳಗೊಂಡ ಹಾಲಿ ಅಸ್ತಿತ್ವವಿರುವ 10 ಮಂದಿಯ ಸಚಿವ ಸಂಪುಟಕ್ಕೆ ಶನಿವಾರ 24 ಮಂದಿ ಸೇರ್ಪಡೆಯಾದರೆ ಜೋಡೆತ್ತು ಸರ್ಕಾರದ ಪರಿಪೂರ್ಣ ಸಂಪುಟ ರಚನೆಯಾದಂತೆ ಆಗುತ್ತದೆ.

ಭರ್ಜರಿ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್​ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಪೂರ್ಣಗೊಂಡಿದ್ದು, ಇಂದು 24 ಶಾಸಕರಿಗೆ ಮಂತ್ರಿಗಿರಿ ಒಲಿದಿದೆ. ಈ 24 ಶಾಸಕರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪ್ರಮಾಣವಚನ ಸ್ವೀಕರಿಸಿದ ಹೆಚ್​​​ಕೆ ಪಾಟೀಲ್​​ ರಾಜಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆದಿದ್ದು ಮೊದಲನೆಯದಾಗಿ ಸಚಿವರಾಗಿ ಹೆಚ್.ಕೆ.ಪಾಟೀಲ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಆರ್​​​ಬಿ ತಿಮ್ಮಾಪುರ ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಆರ್.ಬಿ.ತಿಮ್ಮಾಪುರ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಅಣ್ಣ ಬಸವಣ್ಣನ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಶಿವಾನಂದ ಪಾಟೀಲ್ ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಶಿವಾನಂದ ಪಾಟೀಲ್​​ ಅವರು ಅಣ್ಣ ಬಸವಣ್ಣನ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

 ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಶರಣಬಸಪ್ಪ ದರ್ಶನಾಪುರ ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಶರಣಬಸಪ್ಪ ದರ್ಶನಾಪುರ ಅವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

​​ಪ್ರಮಾಣವಚನ ಸ್ವೀಕರಿಸಿದ ದಿನೇಶ್ ಗುಂಡೂರಾವ್  ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ದಿನೇಶ್ ಗುಂಡೂರಾವ್ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಬುದ್ಧ, ಬಸವ, ಅಂಬೇಡ್ಕರ್​​,ವಾಲ್ಮೀಕಿ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಕೆಎನ್ ​​ರಾಜಣ್ಣ ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಕೆ.ಎನ್.ರಾಜಣ್ಣ ಬುದ್ಧ, ಬಸವ, ಅಂಬೇಡ್ಕರ್​ ಮತ್ತು ವಾಲ್ಮೀಕಿ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು

ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದ ಈಶ್ವರ ಖಂಡ್ರೆ

ರಾಜಭವನದ ಗಾಜಿನಮನೆಯಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಈಶ್ವರ ಖಂಡ್ರೆಯವರು ದೇವರ ಹೆಸರಿನಲ್ಲಿ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಸತ್ಯ, ನಿಷ್ಠೆಯಿಂದ ​​ಪ್ರಮಾಣವಚನ ಸ್ವೀಕರಿಸಿದ ಹೆಚ್​ಸಿ ಮಹದೇವಪ್ಪ ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಡಾ.ಹೆಚ್​. ಸಿ.ಮಹದೇವಪ್ಪ ಸತ್ಯ ಮತ್ತು ನಿಷ್ಠೆಯಿಂದ ​​ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರಮಾಣವಚನ ಸ್ವೀಕರಿಸಿದ ಕೆ.ವೆಂಕಟೇಶ್ ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಕೆ.ವೆಂಕಟೇಶ್ ದೇವರ ಹೆಸರಿನಲ್ಲಿ ​​ಪ್ರಮಾಣವಚನ ಮಾಡಿದ್ದಾರೆ. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಚಲುವರಾಯಸ್ವಾಮಿ ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಎನ್​​. ಚಲುವರಾಯಸ್ವಾಮಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರಮಾಣವಚನ ಸ್ವೀಕರಿಸಿದ ಕೃಷ್ಣಭೈರೇಗೌಡ ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಕೃಷ್ಣ ಭೈರೇಗೌಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ಚಂದ್​​ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

 

 

Share and Enjoy !

Shares