5 ಗ್ಯಾರಂಟಿ ಜಾರಿ – ಸಿಎಂ ಸಿದ್ದರಾಮಯ್ಯ ಘೋಷಣೆ

Share and Enjoy !

Shares
Listen to this article

ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದರು. ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮತನಾಡಿದ್ದು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಯ  ಬಗ್ಗೆ ಹೇಳಿದ್ದಾರೆ.

200 ಯುನಿಟ್ವರೆಗು ಉಚಿತ ವಿದ್ಯುತ್

ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್​ ವಿದ್ಯುತ್​ ಉಚಿತವಾಗಿ ನೀಡಲಾಗುವುದು. ಯಾರು 200 ಯುನಿಟ್​ ಒಳಗಡೆ ವಿದ್ಯುತ್​ ಬಳಸುತ್ತಾರೆ ಅವರು ಬಿಲ್​ ಕಟ್ಟಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮನೆ ಯಜಮಾನಿ ಅಕೌಂಟ್​​ಗೆ 2000 ಸಾವಿರ ಜಮಾ

ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ವಿಚಾರವಾಗಿ ಮಾತನಾಡಿ ಮನೆ ಯಜಮಾನಿಯ ಅಕೌಂಟ್​​ಗೆ ತಿಂಗಳಿಗೆ 2000 ಸಾವಿರ ರೂ. ಹಾಕುತ್ತೇವೆ. ಹೀಗಾಗಿ ಅವರು ಅರ್ಜಿ ಸಲ್ಲಿಸಬೇಕು. ಜೂನ್​ 15 ರಿಂದ ಜುಲೈ 15 ವರೆಗೆ ಅರ್ಜಿ ಸಲ್ಲಿಸಲು ಸಮಯಾಕಾವಶ ನೀಡಲಾಗುವುದು. ಮನೆ ಯಜಮಾನಿ ಕಡ್ಡಾಯವಾಗಿ ಆಧಾರ್​ ಕಾರ್ಡ್​​, ಬ್ಯಾಂಕ್​ ಅಕೌಂಟ್​ ಪಾಸ್​ಬುಕ್​ ಜೆರಾಕ್ಸ್​ ನೀಡಬೇಕು. ಎಪಿಎಲ್​ ಮತ್ತು ಬಿಪಿಎಲ್​​ ಕಾರ್ಡ್​ದಾರರಿಗೂ ಕೂಡ ಈ ಯೋಜನೆ ಅನ್ವಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜುಲೈ 1ರಿಂದ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುತ್ತೇವೆ

 ಜುಲೈ 1 ರಿಂದ ಬಿಪಿಎಲ್​ ಮತ್ತು ಅಂತ್ಯೋದಯ ಕಾರ್ಡ್​ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಜಾರಿ

ಶಕ್ತಿ ಗ್ಯಾರೆಂಟಿ ಯೋಜನೆಯಡಿ ಎಲ್ಲ ಮಹಿಳೆಯರಿಗೆ, ವಿದ್ಯಾರ್ಥಿಗಳು ಉಚಿತವಾಗಿ ಸರ್ಕಾರಿ ಬಸ್​​ನಲ್ಲಿ ಸಂಚರಿಸಬಹುದಾಗಿದೆ. ಆದರೆ ರಾಜ್ಯದ ಒಳಗೆ ಮಾತ್ರ. ಆದರೆ ಎಸಿ ಮತ್ತು ಲಗ್ಜುರಿ ಬಸ್​ಗಳು ಹೊರತುಪಡಿಸಿ ಈ ತಿಂಗಳು 11ನೇ ತಾರಿಕಿನಿಂದ ಸಂಚರಿಸಬಹುದು.

ಯುವನಿಧಿ ಜಾರಿ, ಪಧವಿದದರಿಗೆ 3 ಸಾವಿರ, ಡಿಪ್ಲೊಮಾದವರಿಗೆ 1.500 ಸಾವಿರ

ಯುವನಿಧಿ ಯೋಜನೆ ಅಡಿ 2022-23 ರಲ್ಲಿ ವ್ಯಾಸಂಗ ಮಾಡಿ ಪಾಸ್ ಆಗಿ, ನೋಂದಾಯಿಸಿಕೊಂಡವರಿಗೆ ಪ್ರತಿ ತಿಂಗಳು ಪಧವಿದರರಿಗೆ 3 ಸಾವಿರ ರೂ., ಡಿಪ್ಲೋಮಾದವರಿಗೆ 1.500 ಸಾವಿರ ರೂ. 24 ತಿಂಗಳು ನೀಡುತ್ತೇವೆ. ಆದರೆ ಇದರ ಒಳಗೆ ಯಾರಾದರೂ ಸರ್ಕಾರಿ ಮತ್ತು ಖಾಸಗಿ ಕಂಪನಿಗಳಿಗೆ ಸೇರಿದರೇ ಅವರಿಗೆ ನೀಡುವುದಿಲ್ಲ. ಇವರು ನಿರುದ್ಯೋಗಿಗಳು ಎಂದು ಘೋಷಿಸಿಕೊಂಡಿರಬೇಕು. ಮತ್ತು ಇದಕ್ಕೆ ಅರ್ಜಿಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

 

Share and Enjoy !

Shares