ಜೂನ್ 5 ರಿಂದ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ- ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ

Share and Enjoy !

Shares

ಬೆಂಗಳೂರು: ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ವರುಣಾರ್ಭಟ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಒಳನಾಡಿನಲ್ಲಿ ಐದು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ ಮುಂಗಾರು ಆರಂಭದ ಹಿನ್ನೆಲೆ, ರಾಜ್ಯಾದ್ಯಂತ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ಕೃಷಿ ಉಪಕರಣಗಳನ್ನು ಖರೀದಿ ಮಾಡುವಲ್ಲಿ ಅನ್ನದಾತ ಬ್ಯುಸಿ ಆಗಿದ್ದಾನೆ. ಕೆಲವೆಡೆ ರೈತರಿಗೆ ಕೃಷಿ ಇಲಾಖೆಯಿಂದ ಉಚಿತ ಬಿತ್ತನೆ ಬೀಜ ಕೊಡಲಾಗುತ್ತಿದೆ.

ಕರಾವಳಿ ಜಿಲ್ಲೆಗಳಲ್ಲಿ ಶನಿವಾರದಿಂದ ನಾಲ್ಕು ದಿನ ಸಾಧಾರಣ ಹಾಗೂ ಕೊನೆಯ ದಿನ (ಜೂನ್ 7) ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ಸಾಧಾರಣ ಮಳೆಯಾಗಲಿದ್ದು, ಜೂನ್5 ರಿಂದ ಜೂನ್7ರವರೆಗೆ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಐದೂ ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

Share and Enjoy !

Shares