ಗೃಹಲಕ್ಷ್ಮೀ ಯೋಜನೆ ಪ್ರಕಟ; ಪ್ರಮುಖ 5 ಷರತ್ತುಗಳಿವೆ.

Share and Enjoy !

Shares
Listen to this article
 ಬೆಂಗಳೂರು:ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಮನೆ ಯಜಮಾನಿಗೆ 2000 ರೂಪಾಯಿ ಕೊಡುವ ಗೃಹಲಕ್ಷ್ಮೀ ಯೋಜನೆ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಪ್ರಮುಖವಾಗಿ ಐದು ಷರತ್ತುಗಳನ್ನು ಹಾಕಲಾಗಿದೆ. ಜತೆಗೆ ಆನ್‌ಲೈನ್‌ ಅಥವಾ ನೇರವಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಕಾಂಗ್ರೆಸ್‌ ಸರ್ಕಾರದ ಎರಡನೇ ಗ್ಯಾರಂಟಿಯಾದ ಗೃಹ ಲಕ್ಷ್ಮೀ ಯೋಜನೆಯ ಕುರಿತು ಅಧಿಕೃತ ಆದೇಶ ಹೊರಬಿದ್ದಿದೆ. ಈ ಯೋಜನೆಯಡಿ ಮನೆಯ ಯಜಮಾನಿಗೆ 2000ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಲಾಭ ಪಡೆದುಕೊಳ್ಳಲು ಸರ್ಕಾರವು ಹಲವು ಷರತ್ತುಗಳನ್ನು ವಿಧಿಸಿದೆ.ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ಮುಂದಾಗಿತ್ತು. ಇತ್ತೀಚೆಗೆ ನಡೆದ ಸಚಿವ ಸಂಪುಟದ ಅನುಮೋದನ ಪಡೆದುಕೊಂಡಿತ್ತು. ಸದ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಪ್ರಮುಖ ಷರತ್ತುಗಳು:

  1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
    2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ
  2. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್‌ ಖಾತೆ ಮತ್ತು ಆಧಾರ ಕಾರ್ಡ್‌ ಗಳನ್ನು ಜೋಡಣೆ ಮಾಡಬೇಕು.
    4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
    5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಗೃಹಲಕ್ಷ್ಮೀ ಅರ್ಜಿ ಸಲ್ಲಿಸುವುದು.

ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬೇಕು. ಆ ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡುವುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್‌ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌ ಮೂಲಕವಾಗಲಿ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ತಪ್ಪು ಮಾಹಿತಿ ನೀಡಿದರೆ ಸೂಕ್ತ ಕ್ರಮ ಎಚ್ಚರಿಕೆ

ಯೋಜನೆಗೆ ಅರ್ಜಿ ಸಲ್ಲಿಸುವರಿಗೆ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡಲಾಗುತ್ತದೆ. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನ ಮಾಗುತ್ತದೆ. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುತ್ತದೆ. ಜತೆ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಬಾಡಿಗೆದಾರರಿಗೆ ‘ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್‌ ಇಲ್ಲಎಂದು ಮಾರ್ಗಸೂಚಿಯಲ್ಲಿಹೇಳಿದ್ದ ಸರಕಾರ, ತೀವ್ರ ಆಕ್ರೋಶದ ಬಳಿಕ ಆದೇಶವನ್ನು ಪರಿಷ್ಕರಿಸಿತ್ತು. ಈಗ ‘ಗೃಹ ಲಕ್ಷ್ಮಿ’ ಗ್ಯಾರಂಟಿಯಲ್ಲೂಷರತ್ತುಗಳ ಮೂಲಕ ಜನತೆಗೆ ಸರಕಾರ ಶಾಕ್‌ ನೀಡಿದೆ.

 

Share and Enjoy !

Shares