ಗೃಹಜ್ಯೋತಿ ಯೋಜನೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ: ಮೊದಲ ದಿನವೇ 55 ಸಾವಿರ ಗ್ರಾಹಕರು ಅರ್ಜಿ ಸಲ್ಲಿಕೆ

Share and Enjoy !

Shares
Listen to this article

ಬೆಂಗಳೂರು: ರಾಜ್ಯ ಕಾಂಗ್ರೆಸ್ಸರ್ಕಾರ ಚುನಾವಣೆ ವೇಳೆ ಘೋಷಿಸಿದ್ದ ಪಂಚ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಭಾನುವಾರದಿಂದ ಆಂಭವಾಗಿದೆ. ಬೆಸ್ಕಾಂ ಕಚೇರಿ ಮತ್ತು ಹಾಗೂ ನಾಡ ಕಚೇರಿಗಳಲ್ಲಿ ಇಂದು ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಹಾಗಾಗಿ ಗೃಹಜ್ಯೋತಿ ಯೋಜನೆಗೆ ಮೊದಲ ದಿನವೇ ರಾಜ್ಯದಲ್ಲಿ 55,000 ಅರ್ಜಿಗಳು ಸಲ್ಲಿಕೆ ಆಗಿದ್ದು ಮೂಲಕ ಜನರಿಂದ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ ಎಂದು ರಾಜ್ಯ ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದ ಎಲ್ಲಾ ಗೃಹ ಬಳಕೆ ಗ್ರಾಹಕರಿಗೆ 200 ವರೆಗೆ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ ಯೋಜನೆ ನೋಂದಣಿಯು ಸೇವಾ ಸಿಂಧು ಪೋರ್ಟಲ್ನಲ್ಲಿ ಜೂನ್‌ 18 ರಿಂದ ಆರಂಭವಾಗಿದೆ. ಭಾನುವಾರ ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ ಒಟ್ಟು 55000 ಗ್ರಾಹಕರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ.

ನೋಂದಣಿ ಪ್ರಕ್ರಿಯೆ ರಾಜ್ಯದ ಎಲ್ಲಾ ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಏಕಕಾಲದಲ್ಲಿ ಆರಂಭ ಮಾಡಲಾಗಿತ್ತು. ನೋಂದಣಿಯನ್ನು ಸೇವಾ ಸಿಂಧು ಪೋರ್ಟಲ್ sevasindhugs.karnataka.gov.in ಮೂಲಕ ಮಾಡಲು ಅವಕಾಶ ಕಲ್ಪಿಸಲಾಗಿತ್ತು.

ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗ್ರಾಹಕರು ವಿದ್ಯುತ್ ಬಿಲ್ನಲ್ಲಿರುವ ಖಾತೆ ಸಂಖ್ಯೆ, ತಮ್ಮ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.

ಆರಂಭವಾದ ದಿನದಂದೇ ಸರ್ವರ್ ಸಮಸ್ಯೆ

ಜುಲೈ 1 ರಿಂದ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಗ್ಯಾರಂಟಿಯನ್ನು ಸರ್ಕಾರ ಜಾರಿ ಮಾಡಲಿದೆ. ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಇಂದಿನಿಂದಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಅರ್ಜಿ ಸಲ್ಲಿಕೆ ಆರಂಭವಾದ ದಿನದಂದೇ ಸರ್ವರ್ ಸಮಸ್ಯೆ ಕೂಡ ಎದುರಾಗಿತ್ತು.

.

Share and Enjoy !

Shares