ವಿದ್ಯುತ್ ದರ ಹೆಚ್ಚಳ : ಇಂದು ಸಿದ್ದರಾಮಯ್ಯ ನೇತೃತ್ವದ ಮಹತ್ವದ ಸಭೆ

Share and Enjoy !

Shares
Listen to this article

ಬೆಂಗಳೂರು: ಕರೆಂಟ್‌ ಮುಟ್ಟಿದ್ರೆ ಶಾಕ್‌ ಹೊಡೆಯುತ್ತೆ ಆದ್ರೆ ಈ ತಿಂಗಳ ವಿದ್ಯುತ್ ಬಿಲ್‌ನೋಡಿ ಅದೆಷ್ಟೋ ಜನ ಶಾಕ್ ಆಗಿದ್ದಾರೆ. ಅದರಲ್ಲೂ ಉದ್ಯಮಿಗಳು, ವ್ಯಾಪಾರಿಗಳು ವಿದ್ಯುತ್‌ ದರ ಏರಿಕೆಯಿಂದ ಕಂಗಾಲಾಗಿದ್ದು, ಆಕ್ರೋಶ ಭುಗಿಲೆದ್ದಿದೆ. ವಿದ್ಯುತ್​ ಬಿಲ್​ ದುಪ್ಪಟ್ಟು ಬಂದಿದ್ದರಿಂದ ಜನರಿಂದ ರಾಜ್ಯವ್ಯಾಪಿ ಕಾಂಗ್ರೆಸ್ ಸರ್ಕಾರ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇದು ಮುಂಬರುವ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಇದರಿಂದ ಎಚ್ಚೆತ್ತುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯುತ್ ದರ ಏರಿಕೆಯಾಗಿರುವ ಬಗ್ಗೆ ಚರ್ಚಿಸಲು ಇಂದು (ಜೂನ್ 23) ಮಧ್ಯಾಹ್ನ 12.30ಕ್ಕೆ ಗೃಹ ಕಚೇರಿ ಕೃಷ್ಣದಲ್ಲಿ ಅಧಿಕಾರಿಗಳ ಮಹತ್ವದ ಸಭೆ ಕರೆದಿದ್ದಾರೆ. ಇದರೊಂದಿಗೆ ವಿದ್ಯುತ್ ದರ ಏರಿಕೆಗೆ ಪರಿಹಾರಕ್ಕೆ ಮುಂದಾಗಿದ್ದಾರೆ.

ರಾಜ್ಯದೆಲ್ಲೆಡೆ ವಿದ್ಯುತ್ ದರ ಹೆಚ್ಚಳ ಖಂಡಿಸಿ ಸರಣಿ ಪ್ರತಿಭಟನೆಗಳು ನಡೆಯುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಇಂಧನ ಇಲಾಖೆ ಅಧಿಕಾರಿಗಳು, ಕೈಗಾರಿಕೆಗಳೋದ್ಯಮಿಗಳು ಭಾಗಿಯಾಗಲಿದ್ದಾರೆ. ಇನ್ನು ಸಭೆಯಲ್ಲಿ ದರ ಏರಿಕೆಗೆ ಪರಿಹಾರ ಸೂತ್ರ ಹೆಣೆಯುವ ಸಾಧ್ಯತೆಗಳಿವೆ. ದರ ಏರಿಕೆ ತಗ್ಗಿಸಲು ಏನೆಲ್ಲಾ ಸಾಧ್ಯತೆಗಳಿವೆ ಎನ್ನುವ ಕುರಿತು ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಯಲಿದೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಕೆಇಆರ್​ಸಿಯ ವಿದ್ಯುತ್​ ದರ ಏರಿಕೆ ಆದೇಶವನ್ನು ವಾಪಸ್​ ಪಡೆದರೂ ಅಚ್ಚರಿಪಡಬೇಕಿಲ್ಲ. ಹೀಗಾಗಿ ಇಂದಿನ ಸಭೆ ಭಾರೀ ಮಹತ್ವ ಪಡೆದುಕೊಂಡಿದ್ದು, ಜನರು ಸಹ ವಿದ್ಯುತ್ ದರ ಕಡಿಮೆ ಮಾಡಬಹುದು ಎನ್ನುವ ನಿರೀಕ್ಷೆಯಲ್ಲಿದ್ದಾರೆ. ಇದರಿಂದ ಎಚ್ಚರ ಚಿತ್ತ ಸಿದ್ದರಾಮಯ್ಯನವರ ಸಭೆಯತ್ತ ನೆಟ್ಟಿದೆ.

 

Share and Enjoy !

Shares