ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಂಗಳೂರು-ಧಾರವಾಡ ಸಂಚಾರ ಜೂನ್ 27ರಿಂದ ಪ್ರಾರಂಭ

Share and Enjoy !

Shares
Listen to this article

ಧಾರವಾಡ: ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ಪ್ರಯೋಗಾರ್ಥ ಸಂಚಾರ ಜೂ.19 ರಂದು ಯಶಸ್ವಿಯಾಗಿದ್ದು, ಜೂ.27 ರಂದು ಸಂಚಾರ ಆರಂಭಿಸಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಧಾರವಾಡ ರೈಲು ನಿಲ್ದಾಣದಿಂದ ವರ್ಚುವಲ್​​ ಮೂಲಕ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಪ್ರತಿ ಮಂಗಳವಾರ ಹೊರತುಪಡಿಸಿ ಎಲ್ಲ ದಿನಗಳಲ್ಲಿ ರೈಲು ಕಾರ್ಯನಿರ್ವಹಿಸಲಿದೆ. ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ರೈಲು ಸೇವೆ ಆರಂಭವಾಗಿ ಮಧ್ಯೆ ದಾವಣಗೆರೆಯಲ್ಲಿ ಮಾತ್ರ ನಿಲ್ಲುತ್ತದೆ. ವಂದೇ ಭಾರತ್ ರೈಲು ಬೆಂಗಳೂರು-ಧಾರವಾಡ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲಿದ್ದು, ಸುಮಾರು ಏಳು ಗಂಟೆಗಳಲ್ಲಿ ಗುರಿ ತಲುಪುತ್ತದೆ.

ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್​​ ರೈಲು ಸದ್ಯಕ್ಕೆ 530 ಆಸನಗಳನ್ನು ಒಳಗೊಂಡ 8 ಬೋಗಿಗಳನ್ನು ಹೊಂದಿದೆ. ಈ ರೈಲು 489 ಕಿಮಿ ಮಾರ್ಗವನ್ನು ಗಂಟೆಗೆ 110 ಕಿಮಿ ವೇಗದಲ್ಲಿ ಚಲಿಸುತ್ತದೆ. ಪ್ರಯಾಣಿಕ ಆದ್ಯತೆಯನುಸಾರ ಬೋಗಿಗಳ ಸಂಖ್ಯೆ ಹೆಚ್ಚಿಗೆ ಮಾಡಲಾಗುವುದು ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ವಂದೇ ಭಾರತ ಎಕ್ಸಪ್ರೆಸ್​ ರೈಲಿನ ಸಮಯ

ಬೆಳಿಗ್ಗೆ 5:54ಕ್ಕೆ ಬೆಂಗಳೂರಿನಿಂದ ಹೊರಟು, 5:55ಕ್ಕೆ ಯಶವಂತಪುರ, 9:15 ದಾವಣಗೆರೆ, 11:30 ಎಸ್​ಎಸ್​ಎಸ್​ ಹುಬ್ಬಳ್ಳಿ ಕೊನೆಯದಾಗಿ 12:10ಕ್ಕೆ ಧಾರವಾಡ ತಲುಪಲಿದೆ.

ಮರಳಿ ಧಾರವಾಡ ನಿಲ್ದಾಣದಿಂದ ಮಧ್ಯಾಹ್ನ 1:15ಕ್ಕೆ ಹೊರಟು, 1:35ಕ್ಕೆ ಎಸ್​ಎಸ್​ಎಸ್​ ಹುಬ್ಬಳ್ಳಿ 3.38ಕ್ಕೆ ದಾವಣಗೆರೆ, ರಾತ್ರಿ 7:13ಕ್ಕೆ ಯಶವಂತಪುರ ಹಾಗೂ 7:45ಕ್ಕೆ ಬೆಂಗಳೂರು ತಲುಪಲಿದೆ.

 

Share and Enjoy !

Shares