ಕೊಪ್ಪಳ: ರಾಜ್ಯದಲ್ಲಿ ಬೀದಿ ನಾಯಿಗಳ ದಾಳಿ ಹೆಚ್ಚಾಗುತ್ತಿದೆ. 8 ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಗಳ ದಾಳಿ ಮಾಡಿ ಆಕೆಯನ್ನು ಎಳೆದಾಡಿ ತೀವ್ರ ಘಾಸಿಗೊಳಿಸಿವೆ.
ಕೊಪ್ಪಳ ಜಿಲ್ಲೆ ಗಂಗಾವತಿ ಪಟ್ಟಣದ ಉಪ್ಪಾರ ಓಣಿಯಲ್ಲಿ 8 ವರ್ಷದ ಖುಷಿ ಎಂಬ ಬಾಲಕಿ ಅಂಗಡಿಗೆ ಹೋಗಿ ಬರುತ್ತಿದ್ದಾಗ ಎರಡು ಬೀದಿ ನಾಯಿಗಳು ಆಕೆಯ ಮೇಲೆ ದಾಳಿ ಮಾಡಿ ಎಳೆದಾಡಿವೆ. ಬಾಲಕಿಯ ಕಿರುಚಾಟ ಕೇಳಿ ಕೂಡಲೆ ಮಹಿಳೆಯೊಬ್ಬರು ಓಡಿ ಬಂದು ನಾಯಿಗಳನ್ನು ಓಡಿಸಿ ಬಾಲಕಿಯ ರಕ್ಷಣೆ ಮಾಡಿದ್ದಾರೆ. ಬಳಿಕ ಸ್ಥಳೀಯರೆಲ್ಲ ಬಂದು ಬಾಲಕಿಯನ್ನು ಕರೆದೊಯ್ದಿದ್ರು. ಬೀದಿ ನಾಯಿಗಳ ದಾಳಿಯಿಂದ ಖುಷಿಗೆ ತೀವ್ರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಬೀದಿ ನಾಯಿಯ ದಾಳಿ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಂಗಾವತಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ನಗರಸಭೆ ಗಮನಕ್ಕೆ ತಂದ್ರು ಯಾವುದೇ ಪ್ರಯೋಜನವಾಗಿಲ್ಲ ಎಂದು ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ ಹೊರ ಹಾಕಿದ್ದಾರೆ.