ಬೆಂಗಳೂರು:ವಿಧಾನಮಂಡಲ ಅಧಿವೇಶನಕ್ಕೆ ಕ್ಷಣಗಣನೆ ಶುರುವಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು ಜುಲೈ 7ಕ್ಕೆ 14ನೇ ಬಾರಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಒಟ್ಟು 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ. 16ನೇ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಹಲವು ವಿಷಯ ಪ್ರಸ್ತಾಪವಾಗಲಿದೆ.
ವಿಧಾನಸೌಧ ಸುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಇಂದಿನಿಂದ 10 ದಿನ ವಿಧಾನಮಂಡಲ ಅಧಿವೇಶನ ಹಿನ್ನೆಲೆ ವಿಧಾನಸೌಧ ಸುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ. 2 ಕಿ.ಮೀ. ವ್ಯಾಪ್ತಿಯಲ್ಲಿ ಪ್ರತಿಭಟನೆ, ಧರಣಿ ನಡೆಸುವಂತಿಲ್ಲ. ವಿಧಾನಸೌಧದ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಮೂವರು ಡಿಸಿಪಿ, 15 ಎಸಿಪಿ, 80 ಇನ್ಸ್ಪೆಕ್ಟರ್ಗಳು ಸೇರಿದಂತೆ ವಿಧಾನಸೌಧ ಸುತ್ತಮುತ್ತ 1500 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಪರಿಷತ್ ಸದಸ್ಯರಾಗಿ ಕಾಂಗ್ರೆಸ್ನ ಮೂವರು ಪ್ರಮಾಣವಚನ ಸ್ವೀಕಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು, ಬೋಸರಾಜು ರಿಂದ ಪ್ರಮಾಣ ವಚನ ಸ್ವೀಕಾರ. ಸಚಿವ ಶರಣಪ್ರಕಾಶ್ ಪಾಟೀಲ್, ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಎಚ್.ಕೆ ಪಾಟೀಲ್, ಶಾಸಕರಾದ ಕೋನರೆಡ್ಡಿ, ಅಲ್ಲಮಪ್ರಭು ಪಾಟೀಲ್, ಹಂಪಯ್ಯ ನಾಯ್ಕ್, ಅಲ್ಲಮಪ್ರಭು ಪಾಟೀಲ್ ಭಾಗಿಯಾಗಿದ್ದಾರೆ.