ಸಿಎಂ ಸಿದ್ದರಾಮಯ್ಯರಿಂದ ಬಜೆಟ್ ಮಂಡನೆ ಆರಂಭ

Share and Enjoy !

Shares
Listen to this article

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.  14ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, ಈ ಮೂಲಕ ದಾಖಲೆ ಬರೆಯಲಿದ್ದಾರೆ.

ತೆಂಗು, ಅಡಕೆ, ದ್ರಾಕ್ಷಿ, ದಾಳಿಂಬೆ ಬೆಳೆ ಸಂಸ್ಕರಣೆಗೆ 10 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿ, ಚಿಕ್ಕಮಗಳೂರು ಕಾಫಿ, ಪ್ರವಾಸೋದ್ಯಮ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ

ಶಿಡ್ಲಘಟ್ಟದಲ್ಲಿ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆ. ಅನುಗ್ರಹ ಯೋಜನೆ ಮರು ಜಾರಿ ಮಾಡಿ ‘ಕುರಿ ಮೇಕೆ ಮೃತಪಟ್ಟರೆ 5 ಸಾವಿರ ರೂ. ಪರಿಹಾರ ನೀಡಲಾಗುವುದು.

ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿಯನ್ನ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಜೊತೆಗೆ ಮಧ್ಯಮಾವಧಿ, ದೀರ್ಘಾವಧಿ ಸಾಲ ಮಿತಿಯನ್ನ 10 ಲಕ್ಷದಿಂದ 15 ಲಕ್ಷಕ್ಕೆ ಏರಿಸಲಾಗಿದ್ದು, ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ ನೀಡಲಾಗುವುದು.

ಹಿಂದಿನ ಸರ್ಕಾರದ ನೀರಾವರಿ ಯೋಜನೆಯನ್ನ ಕೈ ಬಿಡಲು ಸರ್ಕಾರ ನಿರ್ಧಾರ ಮಾಡಿದೆ. 19 ಕೆರೆ ತುಂಬಿಸು ಯೋಜನೆಗೆ ಬರೊಬ್ಬರಿ 770 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಯಾದಗಿರಿ ಸೇರಿ 15 ಜಿಲ್ಲೆಯ 99 ಕೆರೆಗಳಿಗೆ ನೀರು ತುಂಬಿಸಲು ಯೋಜನೆ ಜಾರಿ ಮಾಡಲಾಗಿದ್ದು, ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಮೀಸಲಿಡಲಾಗಿದೆ. ಇನ್ನು ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ ಮಾಡಲಾಗಿದೆ.

ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ, ಬಜೆಟ್‌ನಲ್ಲಿ ಬೆಂಗಳೂರಿಗೆ ಬರೊಬ್ಬರಿ 45 ಸಾವಿರ ಕೋಟಿ ರೂ. ಅನುದಾನ. ಬೆಂಗಳೂರು ವೈಟ್‌ ಟಾಪಿಂಗ್​, ರಸ್ತೆ ಅಭಿವೃದ್ಧಿ, ನಗರೋತ್ಥಾನ, ತಾಜ್ಯ ನಿರ್ವಹಣೆ, ರಾಜಕಾಲುವೆ ತೆರವು & ದುರಸ್ತಿಗೆ ಅನುದಾನ, ಮೆಟ್ರೋ, ಬೆಂಗಳೂರು ಉಪನಗರ ರೈಲ್ವೆ ಯೋಜನೆ, ಬ್ರ್ಯಾಂಡ್ ಬೆಂಗಳೂರಿಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ 45 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ.

ಆರೋಗ್ಯ ಕ್ಷೇತ್ರಕ್ಕೆ ಬಜೆಟ್​ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದ್ದು, ಕೊಪ್ಪಳ, ಕಾರವಾರ ಕೊಡುಗು ಜಿಲ್ಲಾಸ್ಪತ್ರೆಯ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ. ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ, ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ದೇಶದಲ್ಲೇ ಮೊದಲ ಅಂಗಾಂಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಮೈಸೂರು ಮತ್ತು ಕಲಬುರ್ಗಿಯಲ್ಲಿ 30 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ಸ ಸೆಂಟರ್ ತೆರೆಯಲಾಗುವುದು.

 

 

 

Share and Enjoy !

Shares