ಸದ್ಯದ ಮಟ್ಟಿಗೆ ಟೊಮಟೋ ಬೆಲೆ ಕಡಿಮೆಯಾಗುವುದಿಲ್ಲ:ಇನ್ನೂ ಎರಡು ತಿಂಗಳು ಬೆಲೆ ಈಗೇ ಇರುವ ಸಾಧ್ಯತೆ

Share and Enjoy !

Shares
Listen to this article

ಬೆಂಗಳೂರು: ಈಗಾಗಲೇ ಟೊಮೆಟೊ ಶತಕ ಬಾರಿಸಿದೆ. ತರಕಾರಿ ಕೊಳ್ಳಲು ಜನ ಹಿಂದೇಟು ಹಾಕುತ್ತಿದ್ದಾರೆ. ಇನ್ನು ಕೆಲವರು ಟೊಮೆಟೊ ಬದಲು ಹುಣಸೆ ಸೇರಿದಂತೆ ಇತರೆ ಪದಾರ್ಥವನ್ನ ಬಳಸಲು ಶುರು ಮಾಡಿದ್ದಾರೆ. ಅದರಂತೆ ಸಧ್ಯಕ್ಕೆ ಹೊಸ ಕ್ರಾಫ್ಟ್ ಬರುವವರೆಗೂ ಟೊಮೆಟೊ ಬೆಲೆ ಕಡಿಮೆ ಆಗೋದಿಲ್ಲವೆಂದು ರೈತರು ಹೇಳುತ್ತಿದ್ದಾರೆ. ಹೌದು ಹೊಸ ಬೆಳೆ ಬಂದ ಮೇಲೆ ಮಾತ್ರ ಬೆಲೆ ಕಡಿಮೆಯಾಗುವ ಸಂಭವವಿದ್ದು, ಈ ಹೊಸ ಬೆಳೆ ಬರಬೇಕು ಅಂದ್ರೆ, ಒಂದರಿಂದ ಎರಡು ತಿಂಗಳಾದ್ರು ಬೇಕಾಗುತ್ತದೆ. ಹಾಗಾಗಿ ಅಲ್ಲಿಯವರೆಗೂ ಇದೇ ಬೆಲೆ ಮುಂದುವರಿಯುವ ಸಾಧ್ಯತೆಯಿದೆ.

ಟೊಮೆಟೊ  ಬೆಲೆ ಏರಿಕೆಗೆ ಪ್ರಮುಖ ಕಾರಣವೆಂದರೆ ಮಳೆ ಕೊರತೆ, ಟೊಮೆಟೊ ಬೆಳೆಯ ವ್ಯವಸಾಯದ ವೇಳೆ ಮಳೆಯ ಕೊರತೆ ಅಧಿಕವಾಗಿತ್ತು. ಇದೇ ವೇಳೆ ಟೊಮೆಟೊದಲ್ಲಿ ಎಲೆರೋಗವು ಕಾಣಿಸಿಕೊಂಡಿತ್ತು. ಈ ಎರಡು ಪ್ರಮುಖ ಕಾರಣಗಳಿಂದ ಈ ಬಾರಿ ಕಡಿಮೆ ಬೆಳೆ ಬೆಳೆದಿದ್ದಾರೆ. ಅಲ್ಲದೇ ಉತ್ತರ ಪ್ರದೇಶ, ಚತ್ತೀಸ್ ಘಡ್, ಡೆಲ್ಲಿಯಲ್ಲಿಯೂ ಟೊಮೆಟೊ  ಬೆಳೆ ಈ ವರ್ಷ ಕಡಿಮೆಯಾಗಿದೆ. ಹೀಗಾಗಿ ಈ ಭಾಗಗಳಿಂದ ನಮ್ಮ‌ ರಾಜ್ಯಕ್ಕೆ ಹೆಚ್ಚಿನ ಬೇಡಿಕೆ ಬಂದಿದ್ದು, ಕರ್ನಾಟಕದಿಂದ ಈ ಭಾಗಗಳಿಗೆ ಟೊಮೆಟೊ  ರಪ್ತು ಮಾಡಲಾಗುತ್ತಿದೆ. ಈ ವರ್ಷ ಟೊಮೆಟೊಗೆ  ಹೊರರಾಜ್ಯಗಳಿಂದಲೂ ಅತ್ಯಧಿಕ ಬೇಡಿಕೆ ಇದ್ದು, ಬೇಡಿಕೆಗೆ ತಕ್ಕಂತೆ ಟೊಮೆಟೊ  ಸಿಗದ ಕಾರಣ ಹೆಚ್ಚಿನ ಬೆಲೆ ನಿಗಧಿ ಪಡಿಸಿ, ವ್ಯಾಪಾರ‌ ಮಾಡಲಾಗುತ್ತಿದೆ. ಅಲ್ಲದೇ ಪ್ರತಿಭಾರಿ ನಮ್ನ ರಾಜ್ಯಕ್ಕೆ ನಾಸಿಕ್ ಇಂದ ಟೊಮೆಟೊ  ಬರುತ್ತಿತ್ತು. ಆದ್ರೆ, ಈ ಬಾರಿ ನಾಸಿಕ್‌ನಲ್ಲಿಯು ಬೆಳೆ ಬಂದಿಲ್ಲ. ಹೀಗಾಗಿ ನಾಸಿಕ್ ,ತಮಿಳುನಾಡು, ಚನೈಗೆ ಕರ್ನಾಟಕದಿಂದ ರಫ್ತು ಮಾಡಲಾಗುತ್ತಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

ಸಾಮಾನ್ಯವಾಗಿ ಆಷಾಡ ಮಾಸದಲ್ಲಿ ಪ್ರತಿವರ್ಷ ವ್ಯಾಪಾರ ಕಡಿಮೆಯಾಗುತ್ತೆ. ವರ್ಷ ಅಧಿಕ ಮಾಸ ಬಂದಿರುವ ಹಿನ್ನೆಲೆ ಒಂದು ತಿಂಗಳುಗಳ ಕಾಲ ಯಾವುದೇ ಮದುವೆ, ಕಾರ್ಯಕ್ರಮಗಳು ನಡೆಯೋದಿಲ್ಲ. ಇದನ್ನ ಗಮನದಲ್ಲಿಟ್ಟುಕೊಂಡು ಕಡಿಮೆ ಬೆಳೆ ಬೆಳೆದಿದ್ದಾರಾ ರೈತರು ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ, ಪ್ರತಿವರ್ಷ ಜೂನ್ – ಜೂಲೈ ತಿಂಗಳಲ್ಲಿ ಅಷಾಡ ಮಾಸದಲ್ಲಿ ಟೊಮೆಟೊ ಹೆಚ್ಚು ಬೆಳೆದು ನಷ್ಟ ಮಾಡಿಕೊಂಡಿದ್ದೆ ಹೆಚ್ಚು.‌ ಟೋಮಾಟೊ ವ್ಯಾಪಾರವಾಗದೇ ರಸ್ತೆಗೆ ಎಸೆದು ಹೋದ ಎಷ್ಟೋ ಘಟನೆಗಳು ಈ ಹಿಂದೆ ನಡೆದಿವೆ. ಹೀಗಾಗಿ ಈ ವರ್ಷ ಈ ರೀತಿಯಾಗಿ ಆಗಬಾರದು ಎನ್ನುವ ಕಾರಣಕ್ಕೆ ರೈತರು ಹೆಚ್ಚಿನದ್ದಾಗಿ ಬೆಳೆಯದೇ, ಬೇಡಿಕೆಗೆ ತಕ್ಕಷ್ಟು ಟೊಮೆಟೊ ಸಿಗದ ಹಿನ್ನೆಲೆ ಬೆಲೆ ಏರಿಕೆಯಾಗಿರುವ ಸಾಧ್ಯತೆಯಿದೆ.

 

Share and Enjoy !

Shares