ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾಲಯದ 11 ನೇ ಘಟಿಕೋತ್ಸವ ಕಾರ್ಯಕ್ರಮ

Share and Enjoy !

Shares
Listen to this article

ಬಳ್ಳಾರಿ:ಬಳ್ಳಾರಿ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ 11 ನೇ ವಾರ್ಷಿಕ ಘಟಿಕೋತ್ಸವವು ವಿಶ್ವ ವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಜುಲೈ 13 ರಂದು ಬೆಳಗ್ಗೆ 10 ಕ್ಕೆ ಜರುಗಲಿದೆ.

ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‍ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸುವರು.

ಈ ಸಮಾರಂಭದಲ್ಲಿ ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್‍ನ ಅಧ್ಯಕ್ಷರಾದ ಡಾ.ಜೆ.ಕೆ.ಬಜಾಜ್ ಅವರು ಘಟಿಕೋತ್ಸವ ಭಾಷಣ ಮಾಡುವರು.

ಸಮಾರಂಭದಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಚಿವರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್, ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಸಿದ್ದು ಪಿ.ಅಲಗೂರು, ಕುಲಸಚಿವರಾದ ಪ್ರೊ.ಎಸ್.ಸಿ.ಪಾಟೀಲ್ ಹಾಗೂ ಕುಲಸಚಿವರಾದ(ಮೌಲ್ಯಮಾಪನ) ಪ್ರೋ.ರಮೇಶ್ ಓ.ಓಲೇಕಾರ್ ಸೇರಿದಂತೆ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ ಸದಸ್ಯರು ಉಪಸ್ಥಿತಿರಿರುವರು ಎಂದು ವಿವಿ ಪ್ರಕಟಣೆ ತಿಳಿಸಿದೆ.

Share and Enjoy !

Shares