ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವೆಂಕಟೇಶ್ ಟಿ. ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ವೆಂಕಟೇಶ್ ಅವರು ಐ ಎ ಎಸ್ ಶ್ರೇಣಿಯ ಅಧಿಕಾರಿ. ಕೆಲ ವರ್ಷಗಳ ಹಿಂದೆ ವೆಂಕಟೇಶ್ ಅವರು ಬಳ್ಳಾರಿಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.
ಹಾಲಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರನ್ನು ಬೇರೆ ಕಡೆ ವರ್ಗಾಯಿಸಲಾಗಿದ್ದು, ಸ್ಥಳ ನಿಗದಿ ಆಗಿಲ್ಲ. ಪವನಕುಮಾರ್ ಮಾಲಪಾಟಿ ಅವರ ವರ್ಗಾವಣೆಯಿಂದಾಗಿ ತೆರವುಗೊಂಡ ಜಾಗಕ್ಕೆ ವೆಂಕಟೇಶ್ ಅವರನ್ನು ಜಿಲ್ಲಾಧಿಕಾರಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.